ಮಂಡ್ಯಕ್ಕೂ ನಮ್ಮ ಕುಟುಂಬಕ್ಕೂ ಹಲವು ವರ್ಷಗಳ ಸಂಬಂಧವಿದೆ: ಯಾರು ಎಲ್ಲಿಬೇಕಾದರೂ ಸ್ಪರ್ಧಿಸಬಹುದು: ಸಿಎಂ ಕುಮಾರಸ್ವಾಮಿ

ಬೆಂಗಳೂರು: ಮಂಡ್ಯಕ್ಕೂ ನಮ್ಮ ಕುಟುಂಬಕ್ಕೂ ಹಲವು ವರ್ಷಗಳ ಸಂಬಂಧ ಇದೆ. ಜಿಲ್ಲೆಯ ಪ್ರೀತಿ-ಅಭಿಮಾನವನ್ನು ದುರುಪಯೋಗ ಪಡಿಸಿಕೊಳ್ಳುವ ಕುಟುಂಬ ನಮ್ಮದಲ್ಲ, ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸಿ ಚುನಾವಣೆಯಲ್ಲಿ ಗೆಲ್ಲಬಹುದು ಎಂದು ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಿಖಿಲ್ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಅವರು, ಚುನಾವಣೆ ಎಂದ ಮೇಲೆ ಎಲ್ಲ ಕಡೆ ಪರ-ವಿರೋಧಗಳು ಇದ್ದೇ ಇರುತ್ತವೆ. ನಿಖಿಲ್​ ಸ್ಪರ್ಧೆ ಬಗ್ಗೆ ಪಕ್ಷದ ಮುಖಂಡರು ತೀರ್ಮಾನ ಮಾಡುವುದಲ್ಲ, ಜನರೇ ತೀರ್ಮಾನಿಸುತ್ತಾರೆ ಎಂದರು.

ಇವತ್ತು ಎಲ್ಲೋ ಹುಟ್ಟಿ ಎಲ್ಲೋ ಸ್ಪರ್ಧೆ ಮಾಡಿ ಜನಪ್ರತಿನಿಧಯಾಗಿ ಆಯ್ಕೆಯಾದವರು ಇದ್ದಾರೆ. ಡಿ.ವಿ. ಸದಾನಂದಗೌಡರು​ ಮಂಗಳೂರಲ್ಲಿ ಹುಟ್ಟಿ ಬೆಂಗಳೂರಲ್ಲಿ ಸ್ಪರ್ಧೆ ಮಾಡಿ ಸಂಸದರಾಗಿದ್ದಾರೆ. ಬಿಎಸ್​ವೈ ಮಂಡ್ಯದಲ್ಲಿ ಹುಟ್ಟಿ ಶಿವಮೊಗ್ಗದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಇನ್ನು ನಾನು ಹಾಸನದಲ್ಲಿ ಹುಟ್ಟಿ ರಾಮನಗರದಲ್ಲಿ ಸ್ಪರ್ಧಿಸಿಲ್ಲವೇ..? ಯಾರು ಎಲ್ಲಿ ಬೇಕಾದರೂ ನಿಲ್ಲಬಹುದು ಎಂದು ಹೇಳುವ ಮೂಲಕ ಮಂಡ್ಯದಲ್ಲಿ ನಿಖಿಲ್ ಸ್ಪರ್ಧೆಯನ್ನು ಸಮರ್ಥಿಸಿಕೊಂಡರು.

ಸದ್ಯ ಮಂಡ್ಯ ಕ್ಷೇತ್ರದಲ್ಲಿ ಏನೇನು ನಡೆಯುತ್ತಿದೆ ಎಂಬುದು ನಾನು ಅರ್ಥ ಮಾಡಿಕೊಳ್ಳಬಲ್ಲೆ. ಮಂಡ್ಯ ಜಿಲ್ಲೆಯ ಪ್ರೀತಿ ಅಭಿಮಾನವನ್ನು ದುರುಪಯೋಗ ಪಡಿಸಿಕೊಳ್ಳುವ ಕುಟುಂಬ ನಮ್ಮದಲ್ಲ. ಮಂಡ್ಯ ಜಿಲ್ಲೆಗೂ ನಮ್ಮ ಕುಟುಂಬಕ್ಕೂ ಹಲವು ವರ್ಷಗಳ ಸಂಬಂಧ ಇದೆ.

ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಸೀಟು ಹಂಚಿಕೆ ಬಗ್ಗೆ ನಮ್ಮ ನಾಯಕರು ತೀರ್ಮಾನ ಮಾಡುತ್ತಾರೆ. ಇನ್ನೂ ಮೂರ್ನಾಲ್ಕು ದಿನಗೊಳಗೆ ಸೀಟು ಹಂಚಿಕೆ ಬಗ್ಗೆ ತೀರ್ಮಾನವಾಗಲಿದೆ ಎಂದರು.

CM H D Kumaraswamy,Nikil contest,mandya

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ