ನೀತಿ ಸಂಹಿತೆ ಜಾರಿ ಹಿನ್ನಲೆ-ಹೋಟೆಲ್ ಮೇಲೆ ಪೊಲೀಸರ ದಾಳಿ

ಬಳ್ಳಾರಿ, ಮಾ.12-ಲೋಕಸಭಾ ಚುನಾವಣಾ ಹಿನ್ನೆಲೆ ಚುನಾವಣಾ ನೀತಿ ಸಂಹಿತೆ ಜಾರಿಗೊಂಡ ಹಿನ್ನೆಲೆ ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿರುವ ಅಲ್ಲಂವಿಟ್ಸ್ ಹೊಟೇಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಅಕ್ರಮ ಮರಳು ಸಾಗಣೆ ಟೆಂಡರ್‍ನ ರಿಂಗ್ ಅಮೌಂಟ್ ಹಂಚಿಕೆ ಸಲುವಾಗಿ ಸೇರಿದ್ದ 200ಕ್ಕೂ ಹೆಚ್ಚು ಮಂದಿ ಪೊಲೀಸರನ್ನು ನೋಡುತ್ತಿದ್ದಂತೆ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು 21 ಮಂದಿಯನ್ನ ವಶಕ್ಕೆ ಪಡೆದಿದ್ದಾರೆ. ಉಳಿದವರು ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಸ್ಥಳದಲ್ಲಿದ್ದ ಒಂದೂವರೆ ಕೋಟಿಗೂ ಅಧಿಕ ಹಣವನ್ನ ಜಪ್ತಿ ಮಾಡಲಾಗಿದೆ ಎನ್ನಲಾಗಿದೆ. ದಾಳಿ ವೇಳೆ ಗುತ್ತಿಗೆದಾರರು ಪೊಲೀಸರ ಮೇಲೆ ಮುಗಿಬಿದ್ದಿದ್ದಕ್ಕೆ ಪರಿಸ್ಥಿತಿಯನ್ನು ತಹಬದಿಗೆ ತರಲು ಎಸ್.ಪಿ ಅರುಣ್ ರಂಗರಾಜನ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆಂದು ತಿಳಿದು ಬಂದಿದೆ.

ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ