ಬಾ-ಬಾಪು 150ನೇ ವರ್ಷಾಚರಣೆ-ಜಿಲ್ಲೆಗೊಂದು ಗಾಂಧಿ ಭವನ ಸಿ.ಎಂ.ಕುಮಾರಸ್ವಾಮಿ

ಬೆಂಗಳೂರು,ಮಾ.13- ಬಾ-ಬಾಪು 150ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಅಕ್ಟೋಬರ್ 2019ರೊಳಗೆ ಜಿಲ್ಲೆಗೊಂದು ಗಾಂಧಿ ಭವನ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡುವಂತೆ ಸಿಎಂ ಕುಮಾರಸ್ವಾಮಿ ಅವರು ಸರ್ಕಾರ ಮುಖ್ಯ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.

ಎಲ್ಲಾ ಜಿಲ್ಲೆಗಳಲ್ಲಿ ಗಾಂಧಿಭವನದ ನಿರ್ಮಾಣಕ್ಕೆ ಸ್ಥಳ ಕಾಯ್ದಿರಿಸಿ ನೀಲಿನಕ್ಷೆ ತಯಾರು ಮಾಡಿದೆ. ಗಾಂಧಿಭವನ ನಿರ್ಮಾಣ ಕಾರ್ಯವನ್ನು ಬಾ-ಬಾಪು 150ನೇ ವರ್ಷಾಚರಣೆಯಲ್ಲಿ ಪೂರ್ಣಗೊಳಿಸುವಂತೆ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷರು ಡಾ. ವೂಡೇ ಪಿ. ಕೃಷ್ಣರವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರ ಹಿನ್ನಲೆಯಲ್ಲಿ ಈ ಸೂಚನೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ