ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಈ ಕ್ಷೇತ್ರದಿಂದ ಸ್ಪರ್ಧೆ ಸಾಧ್ಯತೆ!

ಲಕ್ನೋಮುಂಬರುವ ಲೋಕಸಭೆ ಚುನಾವಣೆಗಾಗಿ ಉತ್ತರಪ್ರದೇಶದಲ್ಲಿ ಎಸ್​ಪಿ-ಬಿಎಸ್​ಪಿ ನಡುವೆ ಮೈತ್ರಿ ಮಾಡಿಕೊಳ್ಳಲಾಗಿದ್ದು, ಎಸ್​ಪಿ ಮುಖ್ಯಸ್ಥ ಅಖಿಲೇಶ್, ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಇಬ್ಬರೂ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದು ಕುತೂಹಲಕಾರಿಯಾಗಿದೆ.

ಈ ಬಗೆಗಿನ ಗೊಂದಲ ಈಗಲೂ ಮುಂದುವರೆದಿದ್ದು, ಮಾಯಾವತಿ ನಾಗಿನ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಬಿಎಸ್​ಪಿ ಮುಖ್ಯಸ್ಥೆ ಈಗ ಅಂಬೇಡ್ಕರ್ ನಗರ ಅಥವಾ ಬಿಜನೌರ್ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂದು ನಿರೀಕ್ಷಿಸಲಾಗಿದೆ. 1989 ರಲ್ಲಿ ಮಾಯಾವತಿ ಅವರು ಬಿಜ್ನೋರ್ನಿಂದ ಸ್ಪರ್ಧಿಸಿದ್ದರು. ಇಲ್ಲಿಂದ ಸಂಸತ್ ಸದಸ್ಯರಾಗಿ ಪಾರ್ಲಿಮೆಂಟ್ ಮೆಟ್ಟಿಲೇರಿದ್ದರು.

ಎಸ್​ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಕನೌಜ್ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ತಿಳಿಸಿದ್ದರು. ಆದರೆ ಇದೀಗ ಅಖಿಲೇಶ್ ತಮ್ಮ ಪತ್ನಿಯನ್ನು ಆ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಿಸಿದ್ದು, ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಿಲ್ಲ. ಮುಲಾಯಂ ಸಿಂಗ್ ಯಾದವ್ ಅವರ ಅಜಮ್ಗಢ್ ಕ್ಷೇತ್ರದಿಂದ ಸ್ಪರ್ಧಿಸಲು ಸಾಧ್ಯವಿದೆ. ವಾಸ್ತವವಾಗಿ, ಸಮಾಜವಾದಿ ಪಕ್ಷವು 9 ಅಭ್ಯರ್ಥಿಗಳನ್ನು ಘೋಷಿಸಿದೆ.

ಇನ್ನು ಎಸ್​ಪಿ-ಬಿಎಸ್​ಪಿ ಮೈತ್ರಿಕೂಟವು ಗೆಲ್ಲುವ ಕುದುರೆಗಳಿಗೆ ಟಿಕೆಟ್ ನೀಡಲು ಸಿದ್ದತೆ ನಡೆಸಿದ್ದು, ಅಭ್ಯರ್ಥಿಗಳ ಹೆಸರು ಬಹುತೇಕ ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ