
ಬೀದರ್, ಮಾ.13- ಲೋಕಸಭಾ ಕ್ಷೇತ್ರವನ್ನು ಹೇಗಾದರೂ ಮಾಡಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ರಣತಂತ್ರ ರೂಪಿಸುತ್ತಿರುವ ಕಾಂಗ್ರೆಸ್ ಕ್ರಿಕೆಟ್ ತಾರೆ ಮೊಹಮದ್ ಅಜರುದ್ದೀನ್ ಅವರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಸ್ಥಳೀಯ ಮುಖಂಡರು ವಿರೋಧ ವ್ಯಕ್ತವಾಗಿದೆ.
ಹೊರಗಿನವರ ಬೇಡಾ ಸ್ಥಳೀಯ ಅಲ್ಪಸಂಖ್ಯಾತ ಮುಖಂಡರು ಆದ್ಯತೆ ನೀಡಿ ಎಂದು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಕ್ಷದ ವರಿಷ್ಠರಿಗೆ ಒತ್ತಡ ಹೇರಿದ್ದಾರೆ.
ಈ ಕ್ಷೇತ್ರದಲ್ಲಿ ಬಿಜೆಪಿ ಪ್ರಬಲವಾಗಿದ್ದು ಕಾಂಗ್ರೆಸ್ ಸಮರ್ಥ ಅಭ್ಯರ್ಥಿ ಹುಡುಕಾಟದಲ್ಲಿದೆ ಎನ್ನಲಾಗುತ್ತಿದೆ. ಬಿಜೆಪಿ ಭಗವಂತ ಖೂಬಾ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.