
ಮೈಸೂರು,ಮಾ.13- ಲೋಕಸಭಾ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಶಸ್ತ್ರಾಸ್ತ್ರಗಳನ್ನು ಠೇವಣಿ ಇಡುವಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಸೂಚಿಸಿದ್ದಾರೆ.
ರಹದಾರಿ(ಲೈಸನ್ಸ್) ಹೊಂದಿರುವವರು ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ಶಸ್ತ್ರಾಸ್ತ್ರಗಳನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಠೇವಣೆ ಇಡುವಂತೆ ಆದೇಶಿಸಿದ್ದಾರೆ.
ಯಾವುದೇ ವ್ಯಕ್ತಿ ಶಸ್ತ್ರಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಿದ್ದು ಯಾವುದೇ ಸ್ಪೋಟಕ ಹಾಗೂ ಮಾರಕಾಸ್ತ್ರಗಳನ್ನು ಕೊಂಡ್ಯೊಯುವುದು ಕಾನೂನು ಬಾಹಿರ ಚಟುವಟಿಕೆಯೆಂದು ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.