ಶಹರಾನ್‍ಪುರ, ಮಾ.13- ನೂರಾರು ಮೋಟಾರ್ ಸೈಕಲ್ ಮೂಲಕ ರ್ಯಾಲಿ ನಡೆಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ಉತ್ತರಪ್ರದೇಶದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಹಾಗೂ ಆತನ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಚಂದ್ರಶೇಖರ್‍ನನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಂತೆ ಅನಾರೋಗ್ಯಕ್ಕೊಳಗಾದರಿಂದ ಇಲ್ಲಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ತಿಳಿಸಿದ್ದಾರೆ.
ಉತ್ತರಪ್ರದೇಶದ ಶಹರಾನ್‍ಪುರ ಜಿಲ್ಲೆಯ ಡಿಯೋಬಾಂದ್ ಪೊಲೀಸರು ಚಂದ್ರಶೇಖರ್ ಹಾಗೂ ಆತನ ಬೆಂಬಲಿಗರನ್ನು ಬಂಧಿಸಿರುವುದಾಗಿ ಅವರು ತಿಳಿಸಿದರು.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಚಂದ್ರಶೇಖರ್, ಪ್ರಧಾನಿ ಮೋದಿ, ಕೇಂದ್ರ ಸಚಿವೆ ಸ್ಮೃತಿ ಇರಾನಿ, ವಿರುದ್ಧ ಪ್ರತಿಪಕ್ಷಗಳು ಸದೃಢ ಅಭ್ಯರ್ಥಿಗಳನ್ನು ಹಾಕುವಲ್ಲಿ ವಿಫಲರಾದರೆ ಭೀಮ್ ಆರ್ಮಿಯಿಂದ ಬಲಾಡ್ಯ ಅಭ್ಯರ್ಥಿಗಳನ್ನು ಚುನಾವಣಾ ಕಣಕ್ಕಿಳಿಸಲಾಗುವುದು ಎಂದು ಹೇಳಿದ್ದರು.