ಮತದಾರರಿಗೆ ನಾಲ್ಕು ಅಮೂಲ್ಯ ಸಲಹೆಗಳನ್ನು ನೀಡಿದ ಪ್ರಧಾನಿ

ನವದೆಹಲಿ, ಮಾ.13- ಲೋಕಸಭಾ ಚುನಾವಣಾ ದಿನಾಂಕ ಪ್ರಕಟವಾಗುತ್ತಿದ್ದಂತೆ ಕೇಂದ್ರದ ಆಡಳಿತಾರೂಢ ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ.

ಒಂದೆಡೆ ರಾಷ್ಟ್ರವ್ಯಾಪಿ ಪಕ್ಷ ಸಂಘಟನೆ ಮತ್ತು ಬಲವರ್ಧನೆಯನ್ನು ತೊಡಗಿಡಿರುವ ಪಕ್ಷವು ಅಬ್ಬರದ ಪ್ರಚಾರಕ್ಕೂ ಸಕಲ ರೀತಿಯಲ್ಲೂ ಸಜ್ಜಾಗಿದೆ.

ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ, ತಮ್ಮ ಬ್ಲಾಗ್‍ನಲ್ಲಿ ಮತದಾರರಿಗೆ ನಾಲ್ಕು ಅಮ್ಯೂಲ ಸಲಹೆಗಳನ್ನು ನೀಡಿದ್ದಾರೆ.

ಮತದಾನ ಎಲ್ಲರ ಹಕ್ಕು. ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯಂತ ಜವಾಬ್ದಾರಿಯುತ ಹೊಣೆಗಾರಿಕೆ. ಹೀಗಾಗಿ ಎಲ್ಲರೂ ತಪ್ಪದೇ ಮತದಾನ ಮಾಡಬೇಕೆಂದು ಕೋರಿದ್ಧಾರೆ.

ಮತದಾನ ಮಾಡುವುದು ಹೆಮ್ಮೆಯ ಸಂಗತಿ. ಮತದಾರರು ತನ್ನ ಹೆಸರುಗಳನ್ನು ಪಟ್ಟಿಯಲ್ಲಿ ಪರಿಶೀಲಿಸಿಕೊಳ್ಳಬೇಕು. ಹೆಸರು ಕೈಬಿಟ್ಟು ಹೋಗಿದ್ದರೆ ಅದನ್ನು ನೋಂದಣಿ ಮಾಡಿಕೊಳ್ಳಬೇಕು. ಬೇರೆಯವರಿಗೂ ಸಹ ಇದನ್ನು ತಿಳಿಸಬೇಕು. ಮತದಾರರೆಲ್ಲರೂ ಕಡ್ಡಾಯವಾಗಿ ತಮ್ಮ ಹಕ್ಕನ್ನು ಚಲಾಯಿಸಬೇಕೆಂದು ಪ್ರಧಾನಿ ಮನವಿ ಮಾಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ