ಬೆಳಗಾವಿ ಕ್ಷೇತ್ರದ ಅಭ್ಯರ್ಥಿ-ಹೈಕಮಾಂಡ್ ಹೇಳಿಕೆಗೆ ಬದ್ದ-ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು, ಮಾ.14-ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ತಮಗೆ ಈ ಮೊದಲು ಸಂಸದರಾಗಬೇಕು ಎಂಬ ಆಸೆ ಬಲವಾಗಿತ್ತು. ಅದಕ್ಕಾಗಿ ಐದು ವರ್ಷ ಜಿಲ್ಲೆಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡಿದ್ದೆ. 2014ರ ಲೋಕಸಭೆ ಚುನಾವಣೆಯಲ್ಲಿ 4.90ಲಕ್ಷ ಮತಗಳನ್ನು ಪಡೆದಿದ್ದೆ. ಅನಂತರ ನಾನು ಶಾಸಕಿಯಾಗಿದ್ದೇನೆ. ಶಾಸಕಿಯಾಗಿ ಮಾಡುವ ಕೆಲಸ ಬಹಳಷ್ಟು ಇವೆ. ಇದರ ಹೊರತಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಹೈಕಮಾಂಡ್ ಆದೇಶಿಸಿದರೆ ಅದಕ್ಕೆ ತಲೆಬಾಗುತ್ತೇನೆ ಎಂದರು.

ಸಂಭವನೀಯ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರು ಕೇಳಿ ಬರುತ್ತಿರುವುದು ನನಗೆ ಗೊತ್ತಿಲ್ಲ. ನನ್ನ ಸಹೋದರನ ಸ್ಪರ್ಧೆ ಬಗ್ಗೆಯೂ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಹೇಳಿದರು.

ಬೆಳಗಾವಿ ಮತ್ತು ಚಿಕ್ಕೋಡಿ ಎರಡೂ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಈ ಬಾರಿ ಗೆಲುವು ಸಾಧಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ