ಮನೆಯಲ್ಲಿ ಮಾದಕ ವಸ್ತು ಸಂಗ್ರಹಿಸಿಟ್ಟುಕೊಂಡಿದ್ದ ವಿದೇಶಿ ಪ್ರಜೆಯ ಬಂಧನ

ಬೆಂಗಳೂರು, ಮಾ.15-ಮನೆಯನ್ನು ಬಾಡಿಗೆಗೆ ಪಡೆದು ಮಾದಕ ವಸ್ತುವನ್ನು ಸಂಗ್ರಹಿಸಿಟ್ಟುಕೊಂಡಿದ್ದ ದಕ್ಷಿಣ ಆಫ್ರಿಕಾ ಮೂಲದ ವ್ಯಕ್ತಿಯನ್ನು ಸಿಸಿಬಿ ಪೆÇಲೀಸರು ಬಂಧಿಸಿ 15 ಲಕ್ಷ ಮೌಲ್ಯದ 32 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾ ಐವರ್‍ಕೋಸ್ಟ್ ನಿವಾಸಿ ತೌರೆ ಮುಸ್ತಫಾ(44) ನನ್ನು ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ.
ಹೆಣ್ಣೂರು ಠಾಣಾ ವ್ಯಾಪ್ತಿಯ ಚಿಕ್ಕಣ್ಣ ಲೇಔಟ್‍ನ ಮನೆಯೊಂದರ ನೆಲಮಹಡಿಯನ್ನು ಬಾಡಿಗೆಗೆ ಪಡೆದು ಈ ಮನೆಯಲ್ಲಿ ಗಾಂಜಾ ಸಂಗ್ರಹಿಸಿಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದನು.

ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೆÇಲೀಸರು ಮನೆ ಮೇಲೆ ದಾಳಿ ಮಾಡಿ 15 ಲಕ್ಷ ಮೌಲ್ಯದ 32 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಈತ ದಕ್ಷಿಣ ಆಫ್ರಿಕಾದಿಂದ ವ್ಯಾಪಾರದ ನಿಮಿತ್ತ ಭಾರತಕ್ಕೆ ಬಂದು ಹೆಣ್ಣೂರಿನಲ್ಲಿ ವಾಸ್ತವ್ಯ ಹೂಡಿ ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬನಿಂದ ಗಾಂಜಾವನ್ನು ಕೆಜಿಗಟ್ಟಲೆ ಖರೀದಿ ಮಾಡಿ ತನ್ನದೇ ವ್ಯವಸ್ಥಿತ ರೀತಿಯಲ್ಲಿ ಜಾಲವನ್ನು ಸಂಘಟಿಸಿಕೊಂಡು ಪರಿಚಿತ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಅಂಶ ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ.
ಈ ಬಗ್ಗೆ ಹೆಣ್ಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ