ಉಗ್ರ ಮಸೂದ್ ಅಜರ್ ಆಸ್ತಿ ಮುಟ್ಟುಗೋಲಿಗೆ ಮುಂದಾದ ಫ್ರಾನ್ಸ್ ಸರ್ಕಾರ

ಪ್ಯಾರಿಸ್: ಜೈಶ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ನಿರ್ಧರಿಸಿರುವುದಾಗಿ ಫ್ರಾನ್ಸ್ ಸರ್ಕಾರ ತಿಳಿಸಿದೆ.

ಉಗ್ರ ಅಜರ್ ಮಸೂದ್ ನ ಆಸ್ತಿಯನ್ನು ಜಪ್ತಿ ಮಾಡಿಕೊಳ್ಳುವುದಾಗಿ ಫ್ರಾನ್ಸ್ ನ ಆಂತರಿಕ ಸಚಿವಾಲಯ, ವಿತ್ತ ಸಚಿವಾಲಯ ಹಾಗೂ ವಿದೇಶಾಂಗ ಸಚಿವಾಲಯ ಬಿಡುಗಡೆಗೊಳಿಸಿರುವ ಜಂಟಿ ಹೇಳಿಕೆಯಲ್ಲಿ ವಿವರಿಸಿದೆ. ಭಯೋತ್ಪಾದನೆಯಲ್ಲಿ ಅಜರ್ ಶಾಮೀಲಾಗಿರುವ ಬಗ್ಗೆ ಜನರು ಶಂಕೆ ವ್ಯಕ್ತಪಡಿಸಿರುವ ನಿಟ್ಟಿನಲ್ಲಿ ಆತನನ್ನು ಯುರೋಪಿಯನ್ ಒಕ್ಕೂಟದ ಪಟ್ಟಿಯಲ್ಲಿ ಸೇರಿಸುವ ಬಗ್ಗೆ ಫ್ರಾನ್ಸ್ ಚರ್ಚೆ ನಡೆಸುತ್ತಿರುವುದಾಗಿ ತಿಳಿಸಿದೆ.

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಆತ್ಮಾಹುತಿ ದಾಳಿ ನಡೆಸಿ 40 ಮಂದಿ ಯೋಧರು ಹುತಾತ್ಮರಾದ ಘಟನೆಯ ಹೊಣೆಯನ್ನು ಜೈಶ್ ಎ ಮೊಹಮ್ಮದ್ ಉಗ್ರಗಾಮಿ ಸಂಘಟನೆ ಹೊತ್ತುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮಸೂದ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನದ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳು ಒತ್ತಡ ಹೇರಿದ್ದವು. ಆದರೆ ಮಸೂದ್ ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಲು ವಿಶ್ವಸಂಸ್ಥೆಯಲ್ಲಿ ಚೀನಾ ಮತ್ತೆ ಅಡ್ಡಗಾಲು ಹಾಕಿತ್ತು.

France Says Will Freeze Assets Of JeM Chief Masood Azhar

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ