ಜನಸೇನಾ ಪಕ್ಷ ಅಧಿಕಾರಕ್ಕೆ ಬಂದರೆ ಉಚಿತ ಶಿಕ್ಷಣ, ಉದ್ಯೋಗ ಸೃಷ್ಠಿ,ರೈತರಿಗೆ ಪೆನ್ ಶನ್: ಪವನ್ ಕಲ್ಯಾಣ್ ಭರವಸೆ

ರಾಜಮಂಡ್ರಿ: ಕಾಲಿವುಡ್​ ನಟ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್​ ಕಲ್ಯಾಣ್​ ಲೋಕಸಭಾ ಚುನಾವಣಾ ಅಖಾಡಕ್ಕೆ ಧುಮುಕಿದ್ದು, ಭರವಸೆಗಳ ಮಹಾಪೂರವನ್ನೇ ಹರಿಸಿದ್ದಾರೆ.

ಆಂಧ್ರ ಪ್ರದೇಶದ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜತೆಗೆ 5ನೇ ವರ್ಷದ ಜನಸೇನಾ ಸಂಸ್ಥಾಪನ ದಿನಾಚರಣೆ ಹಿನ್ನೆಲೆಯಲ್ಲಿ ಬೃಹತ್​​ ಸಾರ್ವನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪವನ್ ಕಲ್ಯಾಣ್, ಜನಾಸೇನಾ ಪಕ್ಷವನ್ನು ಅಧಿಕಾರಕ್ಕೆ ತಂದರೆ, ರೈತರಿಗೆ ಕೃಷಿಯಲ್ಲಿ ಬಂಡಾವಳ ಹೂಡಲು ವರ್ಷಕ್ಕೆ 8 ಸಾವಿರ ರೂ. ಹಾಗೂ 60 ವರ್ಷ ಮೇಲ್ಪಟ್ಟ ರೈತರಿಗೆ 5 ಸಾವಿರ ರೂ. ಪಿಂಚಣಿಯನ್ನು ನೀಡುವುದಾಗಿ ಘೋಷಿಸಿದ್ದಾರೆ.

ಜತೆಗೆ ರೈತರಿಗೆ ಉಚಿತವಾಗಿ ಸೋಲಾರ್​ ಯಂತ್ರವನ್ನು ಕೊಡುವುದಾಗಿ ಭರವಸೆ ನೀಡಿದ್ದಾರೆ. ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಜನಸೇನಾ ಪಕ್ಷ ಧುಮುಕಿದೆ.

ಪಕ್ಷವನ್ನು ಗೆಲ್ಲಿಸಿದರೆ, ಮೊದಲ ಆರು ತಿಂಗಳಲ್ಲಿ ಸುಮಾರು ಒಂದು ಲಕ್ಷ ಉದ್ಯೋಗ ಸೃಷ್ಟಿ ಹಾಗೂ ನಂತರ ಐದು ವರ್ಷಗಳಲ್ಲಿ 10 ಲಕ್ಷ ಉದ್ಯೋಗವನ್ನು ಸೃಷ್ಟಿಸುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೇ ಕಿಂಡರ್​ಗಾರ್ಡನ್​ನಿಂದ ಸ್ನಾತಕೋತ್ತರ ಪದವಿಯವರೆಗೂ ಉಚಿತ ಶಿಕ್ಷಣ ನೀಡುವುದಾಗಿ ಆಶ್ವಾಸನೆ ನೀಡಿದರು.

ಈಗಾಗಲೇ ಪವನ್​ ಕಲ್ಯಾಣ್​ ಅವರು 4 ಲೋಕಸಭಾ ಹಾಗೂ 32 ವಿಧಾನಸಭಾ ಕ್ಷೇತ್ರಗಳಿಗೆ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

Pawan Kalyan’s party promises pension to farmers

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ