ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟೀಸ್

ನವದೆಹಲಿ: ಚುನಾವಣೆಯಲ್ಲಿ ಅರ್ಧದಷ್ಟು ಮತ ಯಂತ್ರಗಳನ್ನು ವಿವಿಪ್ಯಾಟ್​ನೊಂದಿಗೆ ಕ್ರಾಸ್​ ಚೆಕ್​ ಮಾಡಿ, ಆನಂತರ ಫಲಿತಾಂಶ ಘೋಷಣೆ ಮಾಡಬೇಕೆಂದು ಪ್ರತಿಪಕ್ಷಗಳು ಸುಪ್ರೀಂ ಮೆಟ್ಟಿಲೇರಿದ್ದು, ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಚುನಾವಣಾ ಆಯೋಗಕ್ಕೆ ನೋಟೀಸ್ ನೀಡಿದೆ.

ಮತಯಂತ್ರಗಳ ಕುರಿತಾಗಿ 21 ವಿಪಕ್ಷಗಳು ಸುಪ್ರೀಂಕೋರ್ಟ್​ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಸಿಜೆಐ ಚುನಾವಣಾ ಆಯೋಗಕ್ಕೆ ನೋಟಿಸ್​ ಜಾರಿ ಮಾಡಿದ್ದಾರೆ. ವಿಪಕ್ಷಗಳ ಆರೋಪ ಸಂಬಂಧ ಚುನಾವಣಾ ಆಯೋಗದ ಹಿರಿಯ ಅಧಿಕಾರಿ ಉತ್ತರಿಸಬೇಕು ಎಂದು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯಿ​ ಅವರ ಪೀಠ ಹೇಳಿದೆ. ಮುಂದಿನ ವಿಚಾರಣೆಯನ್ನು ಮಾರ್ಚ್​ 25ಕ್ಕೆ ಮುಂದೂಡಿದೆ.

Supreme Court issues notice to Election Commission

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ