ಪಾಕಿಸ್ತಾನ ಪರ ಘೋಷಣೆ ಕೂಗಿದ ಯುವಕ-ಯುವನನ್ನು ವಶಕ್ಕೆ ಪಡೆದ ಪೊಲೀಸರು

ಚಿಕ್ಕಮಗಳೂರು, ಮಾ.15- ಚಿತ್ರದುರ್ಗದಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆಂದು 40 ಮಂದಿ ಪ್ರವಾಸಿಗರು ಜಿಲ್ಲೆಗೆ ಆಗಮಿಸಿದ್ದರು. ಬಾಬಾಬುಡನ್‍ಗಿರಿಗೆ ತೆರಳಲು ಮುಂದಾದಾಗ ಕೈಮರ ಚೆಕ್‍ಪೋಸ್ಟ್ ಬಳಿ ಉದ್ದನೆಯ ವಾಹನಗಳನ್ನು ಗಿರಿ ಪ್ರದೇಶಕ್ಕೆ ಹೋಗಲು ನಿರಾಕರಿಸಲಾಯಿತು. ಈ ಸಂದರ್ಭದಲ್ಲಿ ಪ್ರವಾಸಿಗರು ಬೇರೆ ಬಸ್‍ನಲ್ಲಿ ತೆರಳಲು ಮುಂದಾದಾಗ ಈ ಪೈಕಿ ಯೂನಸ್ ಎಂಬಾತ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ.

ಈ ಸಂದರ್ಭದಲ್ಲಿ ಸ್ಥಳೀಯರು ಯುವಕನ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ವ್ಯಾಪಾರಿ ಸಮೀರ್ ಎಂಬುವರು ಆತನಿಗೆ ಈ ರೀತಿ ವರ್ತನೆ ಸರಿಯಲ್ಲ.

ಪ್ರವಾಸಿಗರು ಈ ರೀತಿ ನಡೆದುಕೊಳ್ಳಬಾರದು ಎಂದು ಬುದ್ದಿ ಹೇಳಿದ್ದಾರೆ.

ಈ ವಿಷಯ ತಿಳಿದ ಬಜರಂಗದಳದ ಕಾರ್ಯಕರ್ತರು ಕೈಮರಕ್ಕೆ ದೌಡಾಯಿಸಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಕೂಗಿದ ಯೂನಸ್ ಎಂಬಾತನಿಗೆ ಸ್ಥಳೀಯರು ಥಳಿಸಿದರೆಂದು ಹೇಳಲಾಗಿದೆ.

ಸುದ್ದಿ ತಿಳಿದ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಯೂನಸ್‍ನನ್ನು ವಶಕ್ಕೆ ಪಡೆದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ ವಿಷಯ ತಿಳಿದು ಗ್ರಾಮಾಂತರ ಠಾಣೆಗೆ ಭೇಟಿ ನೀಡಿದಾಗ ಸ್ಥಳದಲ್ಲಿ ಬಿಗುವಿನ ವಾತಾವರಣ ಕಂಡು ಬಂದಿತ್ತು.

ಠಾಣೆ ಮುಂಭಾಗ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸಿದ್ದಲ್ಲದೆ, ಸಾಕಷ್ಟು ಮಂದಿ ಜಮಾಯಿಸಿದ್ದರು. ಪೊಲೀಸರು ಗುಂಪು ಸೇರಿದ್ದ ಯುವಕರನ್ನು ಲಾಠಿ ಬೀಸಿ ಚದುರಿಸಿದರೆಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ