ತುಮಕೂರು ಲೊಕಸಭಾ ಕ್ಷೇತ್ರ ಸಂಬಂಧ-ವೇಣುಗೋಪಾಲ್‍ರವರೊಂದಿಗೆ ಚರ್ಚಿಸಲಾಗುವುದು : ಮಾಜಿ ಸಿ.ಎಂ.ಸಿದ್ದರಾಮಯ್ಯ

ಮೈಸೂರು, ಮಾ.15-ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿ.ಎಂ.ಸಿದ್ದರಾಮಯ್ಯ ಅವರು, ತುಮಕೂರು ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರವಾಗಿ ಸ್ಥಳೀಯ ಜತೆ ನಾನೇನೂ ಮಾತನಾಡುವುದಿಲ್ಲ, ಅದರ ಅಗತ್ಯವೂ ಇಲ್ಲ. ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರೊಂದಿಗೆ ಚರ್ಚೆ ನಡೆಸುತ್ತೇನೆ. 28 ಕ್ಷೇತ್ರಗಳಲ್ಲೂ ಸಹ ಪ್ರಚಾರ ಮಾಡುತ್ತೇನೆ. ಮಂಡ್ಯ, ಹಾಸನ, ಮೈಸೂರು ಎಂದು ಪ್ರತ್ಯೇಕಿಸುವುದು ಬೇಡ. ರಾಜ್ಯದಲ್ಲಿ 20 ಕ್ಷೇತ್ರವನ್ನು ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸ ನಮ್ಮಲ್ಲಿದೆ ಎಂದರು.

ನಮ್ಮಲ್ಲಿ ಯಾವುದೇ ಬಿರುಕಿಲ್ಲ. ಎ.ಮಂಜು ಪಕ್ಷ ಬಿಡುವುದಿಲ್ಲ. ಅವರ ಜತೆ ಮಾತನಾಡಿದ್ದೇನೆ. ಮಾಜಿ ಸಚಿವ ಎಚ್.ಮಹದೇವಪ್ಪ ನಮ್ಮೊಂದಿಗಿದ್ದಾರೆ.

ಮುಖಂಡರಾದ ಶ್ರೀನಿವಾಸ ಪ್ರಸಾದ್ ಅವರು ಚಾಮರಾಜ ಕ್ಷೇತ್ರ ಸ್ಪರ್ಧೆ ಕುರಿತಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ಅವರಿಗೆ ಸ್ವತಂತ್ರ್ಯವಿರುತ್ತದೆ. ಚುನಾವಣೆ ಅವರವರ ವೈಯಕ್ತಿಕ ಎಂದು ಮಾರ್ಮಿಕವಾಗಿ ನುಡಿದರು.

ನಾನು ಮತ್ತು ಮಹದೇವಪ್ಪ ಅವರು ಬೆಂಗಳೂರು-ಮೈಸೂರು ರಸ್ತೆಯನ್ನು ಅಭಿವೃದ್ಧಿಪಡಿಸುವಾಗ ಸಂಸದ ಪ್ರತಾಪ್‍ಸಿಂಹ ಎಲ್ಲಿದ್ದರು ಎಂದು ಪ್ರಶ್ನಿಸಿದರು.

ಮೈಸೂರು ಅಭಿವೃದ್ಧಿಗೆ ಪ್ರತಾಪ್‍ಸಿಂಹ ಅವರ ಕೊಡುಗೆ ಶೂನ್ಯ. ನಾವು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ನಾನು ಮಾಡಿದೆ ಎಂದು ಹೇಳುತ್ತಿದ್ದಾರೆ. ನಾನು ಸಿಂಹ ಅವರ ಮಟ್ಟಕ್ಕೆ ಇಳಿದು ಮಾತನಾಡುವುದಿಲ್ಲ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ