
ಮೈಸೂರು,ಮಾ.16-ದ್ವಿಚಕ್ರ ವಾಹನಗಳು ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ನಗರದ ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ.
ನಗರದ ಅಗ್ರಹಾರ ರಾಮಾನುಜರಸ್ತೆ ವಾಸಿ ಮಧುಕುಮಾರ್(21) ಬಂಧಿತ ಆರೋಪಿ. ಬಂಧಿತನಿಂದ ಪೆÇಲೀಸರು ದ್ವಿಚಕ್ರ ವಾಹನ, ಎರಡು ಮೊಬೈಲ್ , ಲಾಪ್ಟಾಪ್ ಸೇರಿದಂತೆ ನಾಲ್ಕು ಲಕ್ಷ ರೂ.ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಅಗ್ರಹಾರದ ಪದ್ಮ ಚಿತ್ರಮಂದಿರದ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮಧುಕುಮಾರ್ನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಹಾಗೂ ಸರಸ್ವತಿಪುರಂ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳುವು ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.
ಹಾಗೆಯೇ ಸರಸ್ವತಿಪುರಂ ಪೆÇಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಲ್ಯಾಪ್ಟಾಪ್ ಹಾಗೂ ಮೊಬೈಲ್ಕಳವು ಮಾಡಿರುವುದಾಗಿ ಪೆÇಲೀಸರು ವಿಚಾರಣೆ ವೇಳೆ ತಿಳಿಸಿದ್ದಾರೆ.
ಡಿಸಿಪಿ ಮುತ್ತುರಾಜ್ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಮರಿಯಪ್ಪ ನೇತೃತ್ವದಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ಕಿರಣ್ಕುಮಾರ್ಎಎಸ್ಐ ಚಂದ್ರೇಗೌಡ , ಸಿಬ್ಬಂದಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.