ಕೊಳವೆ ಬಾವಿ ರಿಪೇರಿ ಮಾಡುವ ವೇಳೆ ವಿದ್ಯುತ್ ಹರಿದ ಪರಿಣಾಮ-ಸ್ಥಳದಲ್ಲೇ ಮೃತಪಟ್ಟ ರೈತ

ಚೇಳೂರು, ಮಾ.16- ತಮ್ಮ ಜಮೀನಿನಲ್ಲಿ ಅಳವಡಿಸಿದ್ದ ಕೊಳವೆ ಬಾವಿಯನ್ನು ರಿಪೇರಿ ಮಾಡುತ್ತಿದ್ದಾಗ ಏಕಾಏಕಿ ವಿದ್ಯುತ್ ಹರಿದ ಪರಿಣಾಮ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚೇಳೂರು ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚೇಳೂರು ಸಮೀಪದ ಕಚ್ಚೇನಹಳ್ಳಿ ಗ್ರಾಮದ ಸಿದ್ದಪ್ಪ(50) ಮೃತಪಟ್ಟ ರೈತ.

ನಿನ್ನೆ ಸಿದ್ದಪ್ಪ ಕೊಳವೆಬಾವಿಗೆ ಅಳವಡಿಸಿದ್ದ ವೈರ್‍ನ್ನು ರಿಪೇರಿ ಮಾಡುತ್ತಿದ್ದಾಗ ವಿದ್ಯುತ್ ಕಡಿತಗೊಂಡಿತ್ತು. ಈ ವೇಳೆ ಏಕಾಏಕಿ ವಿದ್ಯುತ್ ಸಂಪರ್ಕವಾದ್ದರಿಂದ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲಿ ರೈತ ಮೃತಪಟ್ಟಿದ್ದಾರೆ.
ಸುದ್ದಿ ತಿಳಿದ ಚೇಳೂರು ಠಾಣೆ ಪಿಎಸ್‍ಐ ಪ್ರಕಾಶ್, ಎಎಸ್‍ಐ ಶಂಕರೇಶ್, ಹೆಡ್ ಕಾನ್‍ಸ್ಟೇಬಲ್ ರಾಮಾಂಜನೇಯ ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚೆಗೆ ಚೇಳೂರಿನಲ್ಲಿ ಬೆಸ್ಕಾಂ ಅಧಿಕಾರಿಗಳ ಗಮನಕ್ಕೆ ತರದೆ ಕೊಳವೆಬಾವಿಗೆ ಅಳವಡಿಸಿದ್ದ ವೈರನ್ನು ರೈತರೇ ರಿಪೇರಿ ಮಾಡುತ್ತಿರುವುದರಿಂದ ವಿದ್ಯುತ್ ಯಾವ ಸಮಯದಲ್ಲಿ ಬರುತ್ತದೆ ಎಂಬುದನ್ನು ಗಮನಕ್ಕೆ ಬಾರದೆ ರಿಪೇರಿ ಮಾಡುವಾಗಲೇ ಹಲವು ರೈತರು ಪ್ರಾಣ ಕಳೆದುಕೊಂಡಿದ್ದಾರೆ.

ಚೇಳೂರಿನಲ್ಲಿ ಪ್ರತಿನಿತ್ಯ ವಿದ್ಯುತ್ ಕಣ್ಣಾ ಮುಚ್ಚಾಲೆ ಆಡುತ್ತಿದ್ದು ಈ ಬಗ್ಗೆ ರೈತರು ಎಚ್ಚರಿಕೆ ವಹಿಸಿ, ರಿಪೇರಿ ವೇಳೆ ಬೆಸ್ಕಾಂ ಗಮನಕ್ಕೆ ತಂದು ತಮ್ಮ ಅಮೂಲ್ಯ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದು ಬೆಸ್ಕಾಂ ಅಧಿಕಾರಿಗಳು ಸೂಚಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ