ಸ್ಕೂಟರ್‍ಗೆ ಬಿಎಂಟಿಸಿ ಬಸ್ ಡಿಕ್ಕಿ-ಘಟನೆಯಲ್ಲಿ ವಿದ್ಯಾರ್ಥಿಯ ಸಾವು

ಬೆಂಗಳೂರು, ಮಾ.16- ಸ್ಕೂಟರ್‍ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ಆರ್‍ಟಿ ನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೊಹಮ್ಮದ್ ಶಾಹಿದ್ (18) ಮೃತಪಟ್ಟ ವಿದ್ಯಾರ್ಥಿ.
ಕಾವಲ್‍ಭೆರಸಂದ್ರ ನಿವಾಸಿಯಾದ ಈತ ಪಿಯುಸಿ ವ್ಯಾಸಂಗ ಮಾಡುತ್ತಿದ್ದನು. ಮೊಹಮ್ಮದ್ ಶಾಹಿದ್ ಸ್ಕೂಟರ್‍ನಲ್ಲಿ ಹೋಗುತ್ತಿದ್ದಾಗ ಸಿಬಿಐ ಜಂಕ್ಷನ್ ಬಳಿಯ ಅಂಡರ್‍ಪಾಸ್‍ನಲ್ಲಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಸುದ್ದಿ ತಿಳಿದ ಆರ್‍ಟಿ ನಗರ ಸಂಚಾರಿ ಠಾಣೆ ಪೆÇಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಬಸ್ ಚಾಲಕನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ