
ಶೋಪಿಯಾನ್: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಗುಂಡಿನ ದಾಳಿನಡೆಸಿ ಹತ್ಯೆ ಮಾಡಿದ್ದಾರೆ.
ಖುಷ್ಬು ಜಾನ್ ಹತ್ಯೆಗೀಡಾದ ಪೊಲೀಸ್ ಅಧಿಕಾರಿ. ಖುಷ್ಬು ಶೋಪಿಯಾನ್ ಜಿಲ್ಲೆಯ ವೆಹಿಲ್ ಎಂಬಲ್ಲಿರುವ ತನ್ನ ಗ್ರಾಮಕ್ಕೆ ಆಗಮಿಸಿದ್ರು. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡ ಖುಷ್ಬು ಜಾನ್ ಅವ್ರನ್ನ ಆಸ್ಪತ್ರೆಗೆ ದಾಖಲಿಸಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಇನ್ನು ಉಗ್ರರ ಕೃತ್ಯವನ್ನ ಖಂಡಿಸಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆ ಸ್ವಯಂ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ತಿಳಿಸಿದೆ.
Militants gun down woman police officer outside her house in Kashmir’s Shopian