ಸಿಸಿಬಿ ಪೊಲೀಸರಿಂದ ಮೂರು ಕ್ಲಬ್‍ಗಳ ಮೇಲೆ ದಾಳಿ-105 ಮಂದಿಯ ಬಂಧನ

ಬೆಂಗಳೂರು,ಮಾ.16- ಮೂರು ಕ್ಲಬ್‍ಗಳ ಮೇಲೆ ದಾಳಿ ಮಾಡಿದ ಸಿಸಿಬಿ ಪೊಲೀಸರು 105 ಮಂದಿಯನ್ನು ಬಂಧಿಸಿ, ಪಣಕ್ಕಿಟ್ಟಿದ್ದ 2.74 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ.

ಉಪ್ಪಾರಪೇಟೆ ಠಾಣೆ ಸರಹದ್ದಿನ ಕಿಂಗ್ಸ್ ಕೋಟ್ ಕ್ಲಬ್ ಮತ್ತು ಓಂ ಶಿವ ರಿಕ್ರೀಯೇಷನ್ ಹಾಗೂ ದೇವನಹಳ್ಳಿ ವ್ಯಾಪ್ತಿಯ ರಾಜರಾಜೇಶ್ವರಿ ಮರ್ಚೆಂಟ್ಸ್ ಸ್ಫೋರ್ಟ್ ಅಂಡ್ ರಿಕ್ರಿಯೇಷನ್ ಕ್ಲಬ್‍ಗಳಲ್ಲಿ ಹಲವಾರು ಮಂದಿ ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಡುತ್ತಿದ್ದ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಲಭಿಸಿದೆ.

ತಕ್ಷಣ ಕಾರ್ಯಪ್ರವೃತ್ತರಾದ ತಂಡ ಕ್ಲಬ್‍ಗಳ ಮೇಲೆ ದಾಳಿ ಮಾಡಿ ಜೂಜಾಟದಲ್ಲಿ ತೊಡಗಿದ್ದ105 ಮಂದಿಯನ್ನು ಬಂಧಿಸಿ ಪಣಕ್ಕಿಟ್ಟಿದ್ದ 2.74 ಲಕ್ಷ ಹಣ ಹಾಗೂ ಇನ್ನಿತರ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಉಪ್ಪಾರಪೇಟೆ ಹಾಗೂ ದೇವನಹಳ್ಳಿ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ