ಸಿಎಂ ಪರಿಕ್ಕರ್ ಆರೋಗ್ಯ ಗಂಭೀರ; ಸರ್ಕಾರ ರಚನೆಗೆ ಅವಕಾಶ ನೀಡಿ ಎಂದ ಕಾಂಗ್ರೆಸ್

ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಿಟ್ಟಿನಲ್ಲಿ ಗೋವಾದಲ್ಲಿ ಸರ್ಕಾರ ರಚನೆಗೆ ತಮಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ಗೋವಾ ರಾಜ್ಯಪಾಲರಿಗೆ ಪತ್ರ ಮುಖೇನ ಮನವಿ ಮಾಡಿದೆ.

ಈ ಕುರಿತು ರಾಜ್ಯಪಾಲೆ ಮೃದುಲಾ ಸಿನ್ಹಾ ಅವರಿಗೆ ಪತ್ರ ಬರೆದಿರುವ ಕಾಂಗ್ರೆಸ್, ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರಕ್ಕೆ ಬಹುಮತವಿಲ್ಲ. ಬಿಜೆಪಿ ಸರ್ಕಾರವನ್ನು ವಜಾಗೊಳಿಸಿ ಹಾಗೂ ರಾಜ್ಯ ವಿಧಾನ ಸಭೆಯ ಅತಿ ದೊಡ್ಡ ಕಾಂಗ್ರೆಸ್ ಪಕ್ಷವನ್ನು ಸರ್ಕಾರ ರಚಿಸಲು ಅವಕಾಶ ನೀಡಿ ಎಂದು ಕೋರಿದೆ.

ಬಿಜೆಪಿ ಶಾಸಕ ಫ್ರಾನ್ಸಿಸ್ ಡಿ ಸೋಜಾ ನಿಧನರಾದ ನಂತರ ಪರಿಕ್ಕರ್ ನಾಯಕತ್ವದಲ್ಲಿ ಬಿಜೆಪಿ ಸರ್ಕಾರ ಜನರ ನಂಬಿಕೆಯನ್ನು ಕಳೆದುಕೊಂಡಿದ್ದಲ್ಲದೆ, ವಿಧಾನ ಸಭೆಯಲ್ಲೂ ಬಹುಮತ ಕಳೆದುಕೊಂಡಿದೆ. ಜೊತೆಗೆ ಬಿಜೆಪಿ ಸ್ಥಾನದ ಸಂಖ್ಯೆಯು ಕಡಿಮೆಯಾಗುತ್ತಿದೆ. ಹೀಗಾಗಿ ಬಿಜೆಪಿ ಪಕ್ಷಕ್ಕೆ ಅಧಿಕಾರ ಮುಂದುವರಿಸಲು ಅವಕಾಶ ಕೊಡಬಾರದು. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವನ್ನು ವಜಾ ಮಾಡಿ ಎಂದು ವಿಪಕ್ಷ ನಾಯಕ ಚಂದ್ರಕಾಂತ್ ಕಾವ್ಲೇಕರ್ ಬರೆದಿದ್ದಾರೆ.

Congress Stakes Claim In Goa Amid Concerns Over Manohar Parrikar’s Health

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ