ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ-ಘಟನೆಯಲ್ಲಿ ತಂದೆ-ಮಗನ ಸಾವು

ಬಾಗಲಕೋಟೆ, ಮಾ.18-ಸಂಬಂಧಿಕರ ಹುಟ್ಟುಹಬ್ಬ ಕಾರ್ಯಕ್ರಮವನ್ನು ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಸಾರಿಗೆ ಸಂಸ್ಥೆ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿರೂರು ಗ್ರಾಮದಲ್ಲಿ ನಡೆದಿದೆ.

ಸಿದ್ದಪ್ಪ ಚಿಲಕಿ (45), ಶ್ರೇಯಸ್ (4) ಮೃತಪಟ್ಟ ತಂದೆ-ಮಗ.

ಸಂಬಂಧಿಕರ ಹುಟ್ಟುಹಬ್ಬ ಕಾರ್ಯಕ್ರಮಕ್ಕೆಂದು ಕಮತಿ ಗ್ರಾಮಕ್ಕೆ ದ್ವಿಚಕ್ರ ವಾಹನದಲ್ಲಿ ಸಿದ್ದಪ್ಪ ಚಿಲಕಿ, ಪತ್ನಿ ರೇಖಾ(38),ಮಕ್ಕಳಾದ ಶ್ರದ್ಧಾ(3), ಶ್ರೇಯಸ್, ತೆರಳುತ್ತಿದ್ದರು.

ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸಿದ್ದಪ್ಪ ಹಾಗೂ ಶ್ರೇಯಸ್ ಸ್ಥಳದಲ್ಲೇ ಮೃತಪಟ್ಟರೆ, ರೇಖಾ ಹಾಗೂ ಶ್ರದ್ಧಾಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಗಲಕೋಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ