ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಬೈಕ್-ಘಟನೆಯಲ್ಲಿ ಮಗಳ ಸಾವು

ಬೆಂಗಳೂರು, ಮಾ.18- ಬೈಕ್‍ನಲ್ಲಿ ಮಗಳನ್ನು ಕೂರಿಸಿಕೊಂಡು ತಂದೆ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಬೈಕ್‍ನಿಂದ ಬಿದ್ದ ಪರಿಣಾಮ ಮಗಳು ಸಾವನ್ನಪ್ಪಿರುವ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹಿಮಾಂಶಿ(3) ಮೃತಪಟ್ಟ ದುರ್ದೈವಿಯಾಗಿದ್ದು, ತಂದೆ ರಾಕೇಶ್‍ಕುಮಾರ್ ವರ್ಮ ಸಣ್ಣಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾತ್ರಿ 11ಗಂಟೆ ಸಮಯದಲ್ಲಿ ರಾಕೇಶ್‍ಕುಮಾರ್ ವರ್ಮ ಎಂಬುವರು ಮಗಳು ಹಿಮಾಂಶಿಯನ್ನು ಬೈಕ್‍ನಲ್ಲಿ ಕೂರಿಸಿಕೊಂಡು ಕೋಗಿಲು ಜಂಕ್ಷನ್ ಮುಖಾಂತರ ಮನೆಗೆ ಹೋಗುತ್ತಿದ್ದರು.

ಈ ಸಂದರ್ಭದಲ್ಲಿ ಬಿಳೇಹಳ್ಳಿ ಸೇತುವೆ ಬಳಿ ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ತಂದೆ-ಮಗಳು ಇಬ್ಬರೂ ಕೆಳಗೆ ಬಿದ್ದಿದ್ದಾರೆ.

ಪರಿಣಾಮವಾಗಿ ಹಿಮಾಂಶಿಗೆ ಗಂಭೀರ ಪೆಟ್ಟಾಗಿತ್ತು.ತಕ್ಷಣ ಬಾಲಕಿಯನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ಕರೆದ್ಯೊಯ್ದರಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ರಾಕೇಶ್‍ಕುಮಾರ್ ವರ್ಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ಸಂಬಂಧ ಚಿಕ್ಕಜಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ