ಅನುಮಾನಾಸ್ಪದ ರೀತಿಯಲ್ಲಿ ಸಾವನಪ್ಪಿರುವ ಗೃಹಿಣಿ

ಕೊಪ್ಪಳ, ಮಾ.18-ಗೃಹಿಣಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ನಡೆದಿದೆ.

ಲಕ್ಷ್ಮಿ(40) ಎಂಬ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಗೃಹಿಣಿ. ಲಕ್ಷ್ಮಿಯ ಮೃತದೇಹ ಮನೆಯಲ್ಲಿನ ಫ್ಯಾನ್‍ಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದು, ಲಕ್ಷ್ಮಿಯ ಪತಿ ನಾಗೇಶ್ ಮತ್ತು ಅತ್ತೆ, ಮಾವ ಸೇರಿ ಕೊಲೆ ಮಾಡಿದ್ದಾರೆ ಎಂದು ಲಕ್ಷ್ಮಿ ಸಹೋದರಿ ಆರೋಪಿಸಿದ್ದಾರೆ.

ಲಕ್ಷ್ಮಿಗೆ ಗಂಡನ ಮನೆಯರೆಲ್ಲರೂ ಸೇರಿ ಕಿರುಕುಳ ನೀಡುತ್ತಿದ್ದರು. ಕಿರುಕುಳ ನೀಡುತ್ತಿರುವ ಬಗ್ಗೆ ಲಕ್ಷ್ಮಿ ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಈ ಹಿನ್ನೆಲೆಯಲ್ಲಿ ಕಿರುಕುಳ ನೀಡಿ ಲಕ್ಷ್ಮಿಯನ್ನು ಕೊಲೆ ಮಾಡಿದ್ದಾರೆ ಎಂದು ಮೃತ ಲಕ್ಷ್ಮಿ ಸಹೋದರಿ ಆರೋಪಿಸಿದ್ದಾರೆ.

ಘಟನೆ ಹಿನ್ನೆಲೆಯಲ್ಲಿ ಗಂಗಾವತಿ ಗ್ರಾಮೀಣ ಠಾಣೆಯ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ