
ಶೃಂಗೇರಿ, ಮಾ.18- ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅವರು ಸ್ವತಂತ್ರವಾಗಿ ಸ್ಪರ್ಧಿಸುವ ವಿಚಾರದಲ್ಲಿ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಮಣಸೆ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಬಗ್ಗೆ ತಲೆಕೆಡಿಸಿಕೊಳ್ಳಬೇಕಿಲ್ಲ. ಸಿನಿಮಾದವರೆಲ್ಲ ಈಗ ಮಂಡ್ಯದ ಕಡೆಗೆ ಬರುತ್ತಿದ್ದಾರೆ ಬರಲಿ ಬಿಡಿ ಎಂದರು.
ಮಂಡ್ಯ ಜನರ ಪರ ಏನೇನು ಮಾಡ್ತಾರೆ ನೋಡೋಣ ಎಂದು ಪ್ರಶ್ನೆಯೊಂದಕ್ಕೆ ಸಿಎಂ ಉತ್ತರಿಸಿದರು.