ಪಾಕ್ ನಡೆಸಿದ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ನಡೆಸಿದ ಗುಂಡಿನ ದಾಳಿಯಲ್ಲಿ ಒರ್ವ ಯೋಧ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ರಾಜೌರಿ ಜಿಲ್ಲೆಯ ಅಖನೂರು ಪ್ರದೇಶದ ಕೆರಿ ಬಟ್ಟಾಲ್ ಗ್ರಾಮದ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆ. ಶೆಲ್ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಭಾರತೀಯ ಸೇನಾ ತಿಳಿಸಿವೆ.

ಸುಂದರಬನಿ ಸೆಕ್ಟರ್ ಬಳಿ ಬೆಳಿಗ್ಗೆ ಸುಮಾರು 5.30ಕ್ಕೆ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಗುಂಡಿನ ದಾಳಿ ಜೊತೆಗೆ ಮಾರ್ಟರ್ ಶೆಲ್ ದಾಳಿಯನ್ನು ನಡೆಸಿದೆ. ಪ್ರತಿಯಾಗಿ ಭಾರತೀಯ ಸೇನೆ ಪ್ರತ್ಯುತ್ತರವನ್ನು ನೀಡಿದೆ. ಬೆಳಗ್ಗೆ 7.15ಕ್ಕೆ ಗುಂಡಿನ ದಾಳಿ ನಿಂತಿದೆ ಎಂದು ರಕ್ಷಣಾ ಇಲಾಖೆಯ ವಕ್ತಾರ ದೇವೇಂದ್ರ ಆನಂದ್ ತಿಳಿಸಿದ್ದಾರೆ.

Jammu & Kashmir, One Army jawan killed in ceasefire violation by Pakistan Army

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ