ದಾವಣಗೆರೆಯಿಂದ ಮಲ್ಲಿಕಾರ್ಜುನ್ ಸ್ಪರ್ಧಿಸುವುದು ಖಚಿತ-ಶಾಸಕ ಶಾಮನೂರು ಶಿವಶಂಕರಪ್ಪ

ದಾವಣಗೆರೆ, ಮಾ.18-ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಸ್ಪರ್ಧಿಸುವುದು ಖಚಿತ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನಿಂದ ಸ್ಪರ್ಧಿಸುವ ಅಭ್ಯರ್ಥಿಗಳು ದಾವಣಗೆರೆಯಲ್ಲಿಲ್ಲ. ಹಾಗಾಗಿ ಮಲ್ಲಿಕಾರ್ಜುನ್ ಅವರು ಸ್ಪರ್ಧಿಸುವುದು ಒಳಿತೆಂದು ನಿರ್ಧರಿಸಿದ್ದು, ಈ ಬಗ್ಗೆ ನಾನು ಮಲ್ಲಿಕಾರ್ಜುನ್ ಜೊತೆ ಚರ್ಚಿಸಿದ್ದು, ಅವರೂ ಸಹ ಮೌಖಿಕವಾಗಿ ಒಪ್ಪಿಗೆ ತಿಳಿಸಿದ್ದಾರೆಂದು ಹೇಳಿದರು.

ಈ ಭಾಗದಲ್ಲಿ ಘಟಾನುಘಟಿ ಹುರಿಯಾಳು ಸ್ಪರ್ಧಿಸುವ ಬಗ್ಗೆ ಊಹಾಪೋಹ ಇತ್ತು. ಇದೀಗ ಇದಕ್ಕೆ ತೆರೆಬಿದ್ದಿದ್ದು, ಮಲ್ಲಿಕಾರ್ಜುನ್ ಅವರೇ ಸ್ಪರ್ಧಿಸಲಿದ್ದು, ಅಧಿಕೃತವಾಗಿ ಘೋಷಣೆಯೊಂದೇ ಬಾಕಿಯಿದೆ ಎಂದು ಅವರು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ