ಪ್ಲಾಸ್ಟಿಕ್ ಬ್ಯಾನರ್ ಮತ್ತು ಕರಪತ್ರಗಳನ್ನು ಬಳಸುವಂತಿಲ್ಲ-ಜಿಲ್ಲಾ ಚುನಾವಣಾಧಿಕಾರಿ ಅಭಿರಾಮ್ ಜಿ.ಶಂಕರ್

ಮೈಸೂರು, ಮಾ.18-ಚುನಾವಣೆ ಪ್ರಚಾರದ ಬ್ಯಾನರ್ ಹಾಗೂ ಕರಪತ್ರಗಳಲ್ಲಿ ಪ್ಲ್ಯಾಸ್ಟಿಕ್ ಬಳಕೆ ಮಾಡದಂತೆ ಮೈಸೂರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳೂ ಆದ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.

ಜಿಲ್ಲಾಧಿಕರಿ ಕಚೇರಿ ಸಭಾಂಗಣದಲ್ಲಿ ಚುನಾವಣೆ ಪ್ರಚಾರ ಮುದ್ರಣ ಕುರಿತು ಚುನಾವಣಾ ಆಯೋಗದ ನೀತಿ ನಿಯಮಗಳನ್ನು ಜಿಲ್ಲಾಧಿಕಾರಿಗಳು ಜಿಲ್ಲೆಯ ಮುದ್ರಣಾಧಿಕಾರಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಈ ಬಗ್ಗೆ ತಿಳಿಸಿದರು.

ಚುನಾವಣಾ ಪ್ರಚಾರದ ಮುದ್ರಣ ಸಾಮಗ್ರಿಗಳ ಮಾಹಿತಿಯನ್ನು ಜಿಲ್ಲಾಧಿಕಾರಿಗಳು ಪಡೆದುಕೊಂಡು, ಮುದ್ರಣಕಾರರಿಗೆ ಮಾಹಿತಿ ನೀಡಲು ನೂತನ ಈ ಇ-ಮೇಲ್ ಐಡಿ ತೆರೆಯಲಾಗುವುದು. ಅದರಲ್ಲೂ ಸಹ ಪ್ರತಿನಿತ್ಯ ಮಾಹಿತಿ ಒದಗಿಸಬೇಕೆಂದು ಹೇಳಿದರು.

ಚುನಾವಣಾ ಪ್ರಚಾರದ ಪ್ರತಿಯೊಂದು ಸಾಮಗ್ರಿಗಳ ಮೇಲೂ ಪಬ್ಲಿಷರ್, ಪ್ರಿಂಟರ್ ಹಾಗೂ ಬ್ಯಾನರ್ ಏಜೆನ್ಸಿ ಹೆಸರನ್ನು ಕಡ್ಡಾಯವಾಗಿ ಮುದ್ರಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಮೈಸೂರು ಪ್ರಿಂಟರ್ ಕ್ಲಸ್ಟರ್‍ನ ಪ್ರಧಾನ ಕಾರ್ಯದರ್ಶಿ ಸುರೇಶ್‍ಕುಮಾರ್ ಜೈನ್, ಆಂದೋಲನ ಮುದ್ರಣದ ಚಂದ್ರಶೇಖರ್, ಮಂಜುನಾಥ್ ಗುಪ್ತ, ಮೀರಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ