
ಮೈಸೂರು, ಮಾ.18- ಪಕ್ಕದ ಮನೆಯಲ್ಲಿ ಕಳವು ಮಾಡುತ್ತಿದ್ದ ಮಹಿಳೆಯನ್ನು ನಗರದ ಆಲನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಯರಗನಹಳ್ಳಿ ನಿವಾಸಿ ಸುನಿತಾ(48)ಬಂಧಿತ ಮಹಿಳೆಯಾಗಿದ್ದು, ಈಕೆಯಿಂದ 1.15ಲಕ್ಷ ರೂ ಮೌಲ್ಯದ ಚಿನ್ನಾಭರಣ ಹಾಗೂ 30ಸಾವಿರ ರೂ. ನಗರದು ವಶಪಡಿಸಿಕೊಂಡಿದ್ದಾರೆ.
ಆರೋಪಿ ಮಹಿಳೆ ಪಕ್ಕದ ಮನೆಗೆ ಆಗಾಗ ಹೋಗಿ ಬಂದು ಮಾಡುತ್ತಿದ್ದರು. ಆ ಮನೆಯ ಬೀಗದ ಕೀ ಕದ್ದು, ನಕಲಿ ಕೀ ಮಾಡಿಸಿಕೊಂಡು ಕಳ್ಳತನ ಮಾಡುತ್ತಿದ್ದಳು.
ಮನೆಯಲ್ಲಿ ಚಿನ್ನಾಭರಣ ಕಳುವಾಗಿದ್ದ ಬಗ್ಗೆ ಆಲನಹಳ್ಳಿ ಠಾಣೆಗೆ ದೂರು ನೀಡಲಾಗಿತ್ತು. ಅನುಮಾನಗೊಂಡ ಪೊಲೀಸರು ನೆರೆಮನೆಯ ಸುನಿತಾಳನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾಳೆ.
ಇನ್ಸ್ ಸ್ಪೆಕ್ಟರ್ ಕೃಷ್ಣಪ್ಪ ಹಾಗೂ ಸಿಬ್ಬಂದಿ ಆರೋಪಿಯನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಂಡಿದ್ದಾರೆ.