ಅಬಕಾರಿ ಇಲಾಖೆ ಅಧಿಕಾರಿಗಳಿಂದ 120 ಮಂದಿ ಆರೋಪಿಗಳ ಬಂದನ

ಮೈಸೂರು, ಮಾ.19- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಾದ ನಂತರ ಇದುವರೆಗೂ ಮೈಸೂರು ಜಿಲ್ಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿ 254 ದಾಳಿ ನಡೆಸಿದ್ದಾರೆ.

ಅಬಕಾರಿ ಕಾನೂನಿನಂತೆ 160 ಮೊಕದ್ದಮೆಗಳನ್ನು ದಾಖಲಿಸಿಕೊಂಡಿದ್ದಾರೆ.

ದಾಳಿ ಸಂದರ್ಭದಲ್ಲಿ 9,983.755 ಲೀಟರ್ ಮದ್ಯ, 1226 ಲೀಟರ್ ಬಿಯರ್, 130 ಲೀಟರ್ ಸೇಂದಿ, 33 ಲೀಟರ್ ವೈನ್ ಹಾಗೂ ಸಾಗಾಣಿಕೆಗೆ ಬಳಸಲಾಗುತ್ತಿದ್ದ 26 ವಾಹನಗಳನ್ನು ವಶಪಡಿಸಿಕೊಂಡು 120 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ವಶಪಡಿಸಿಕೊಳ್ಳಲಾದ ಒಟ್ಟು ಮೊತ್ತ 81,11,806ರೂ.ಗಳೆಂದು ಅಬಕಾರಿ ಇಲಾಖೆ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ