ಯಾರೂ ಶಾಂತಿ ಕದಡುವ ಕೆಲಸ ಮಾಡಬಾರದು-ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ

ಮೈಸೂರು, ಮಾ.20-ಮೈಸೂರ-ಕೊಡಗು ಲೋಕಸಭಾ ಚುನಾವಣೆ ಅಧಿಸೂಚನೆ ಪ್ರಕಟವಾದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವ್ಯವಸ್ಥಿತವಾಗಿ ಹಾಗೂ ಶಾಂತಿಯುತವಾಗಿ ನಡೆಯುವ ನಿಟ್ಟಿನಲ್ಲಿ ಮಾ.26ರವರೆಗೆ ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ 100 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ ಸೆಕ್ಷನ್ 144ರಡಿ ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ.

ಯಾರೂ ಶಾಂತಿ ಕದಡುವ ಕೆಲಸ ಮಾಡಬಾರದು, ಆಕ್ಷೇಪಾರ್ಹ ವಸ್ತುಗಳನ್ನು ಹಿಡಿದುಕೊಂಡು ಓಡಾಡಬಾರದು ಎಂದು ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ತಿಳಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಕಚೇರಿ ಸುತ್ತಲೂ 100 ಮೀಟರ್ ದೂರದಲ್ಲಿ ಪೊಲೀಸರು ಬ್ಯಾರಿಕೇಡ್‍ಗಳನ್ನು ಹಾಕಿದ್ದಾರೆ.ನಾಮಪತ್ರ ಸಲ್ಲಿಸುವ ವೇಳೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸುತ್ತಲಿನ ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆ ನಿರ್ಬಂಧಿಸಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ