ಬೆಂಗಳೂರು, ಮಾ.20- ಚುನಾವಣಾ ಪೂರ್ವ ಮೈತ್ರಿ ರಾಜ್ಯಮಟ್ಟದಲ್ಲಿ ಕಾಂಗ್ರೆಸ್-ಜೆಡಿಎಸ್ ನಡುವೆ ಮೈತ್ರಿ ಆಗಿದ್ದರು. ಹಾಸನದಲ್ಲಿ ಸಮರ್ಪಕವಾಗಿ ಆಗಿಲ್ಲ ಎಂದು ಮಾಜಿ ಸಚಿವ ಗಂಡಸಿ ಶಿವರಾಮ್ ತಿಳಿಸಿದರು.
ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಹಾಸನದಲ್ಲಿರುವ ಸಮಸ್ಯೆಗಳನ್ನು ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇವೆ. ಹಾಸನದ ಸಮಸ್ಯೆಗಳ ಬಗ್ಗೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಜೊತೆ ಮಾತನಾಡುವುದಾಗಿ ಭರವಸೆ ಕೊಟ್ಟಿದ್ದಾರೆ ಎಂದು ಹೇಳಿದರು.
ಹಾಸನದಲ್ಲಿನ ಕಾಂಗ್ರೆಸ್ ಕಾರ್ಯಕರ್ತರ ಸಮಸ್ಯೆಗಳ ಬಗ್ಗೆ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಯಾವುದೇ ದೌರ್ಜನ್ಯ ನಡೆಯುವುದಿಲ್ಲ ಎಂದು ಸಚಿವ ರೇವಣ್ಣ ಅವರು ಹೇಳಬೇಕು.
ಈ ವಿಚಾರವನ್ನು ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗಿದೆ, ಆದರೆ ಹಾಸನದಲ್ಲಿ ಮೈತ್ರಿ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದ್ದಾರೆ ಎಂದರು.
ಸಂಸದ ಡಿ.ಕೆ.ಸುರೇಶ್ ಮಾತನಾಡಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಎನ್ನುವುದು ಇನ್ನೂ ಖಚಿತವಾಗಿಲ್ಲ. ತಾವು ಹಾಸನ ಮುಖಂಡರ ಸಭೆಯಲ್ಲಿ ಭಾಗವಹಿಸಿರಲಿಲ್ಲ. ತಾವು ಬೇರೆ ವಿಚಾರಕ್ಕಾಗಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದಾಗಿ ಹೇಳಿದರು.