ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಗುಟ್ಟು ಬಿಟ್ಟುಕೊಡದ ಗೌಡರು-ಗೊಂದಲಕ್ಕೀಡಾದ ಕಾರ್ಯಕರ್ತರು

ಬೆಂಗಳೂರು, ಮಾ.20-ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ದೇವೇಗೌಡರು ಗುಟ್ಟು ಬಿಟ್ಟುಕೊಡದೆ ಇರುವುದರಿಂದ ಕಾರ್ಯಕರ್ತರು ಗೊಂದಲಕ್ಕೀಡಾಗಿದ್ದಾರೆ. ಈ ನಡುವೆ ತುಮಕೂರು ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಒತ್ತಡ ಹೆಚ್ಚಾಗಿದೆ. ತುಮಕೂರು ಕ್ಷೇತ್ರದ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಇಂದು ದೇವೇಗೌಡರನ್ನು ಭೇಟಿ ಮಾಡಿ ತಮ್ಮ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಒತ್ತಾಯ ಮಾಡಿದ್ದಾರೆ.

ತುಮಕೂರು ಕ್ಷೇತ್ರದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ಗೌಡರು, ತುಮಕೂರು ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಯಾವ ರೀತಿ ಪರಿಸ್ಥಿತಿ ಇದೆ ಎಂಬ ಮಾಹಿತಿ ಪಡೆದುಕೊಂಡಿದ್ದಾರೆ. ಒಂದು ವೇಳೆ ತಾವಲ್ಲದೆ, ಪಕ್ಷದಿಂದ ಬೇರೆ ಅಭ್ಯರ್ಥಿ ಸ್ಪರ್ಧೆ ಮಾಡಲು ಅವಕಾಶ ಮಾಡಿಕೊಟ್ಟರೆ ಯಾವ ರೀತಿಯ ಫಲಿತಾಂಶ ಬರಬಹುದು, ಅಲ್ಲಿಯ ಜನರು ಯಾವ ರೀತಿ ಚುನಾವಣೆಯನ್ನು ಪರಿಗಣಿಸಲಿದ್ದಾರೆ ಎಂಬ ಮಾಹಿತಿಯನ್ನು ಮುಖಂಡರಿಂದ ಪಡೆದುಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ