ಲಕ್ನೊ,ಮಾ.20- ಬಹುಜನ ಸಮಾಜವಾದಿ ಪಕ್ಷ ಮುಖ್ಯಸ್ಥೆ ಹಾಗೂ ಮಾಜಿ ಮುಖ್ಯಮಂತ್ರಿ ಮಾಯಾವತಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿರಲು ನಿರ್ಧರಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ತಮ್ಮ ವೈಯಕ್ತಿಕ ಗೆಲುವಿಗಿಂತ ತಮ್ಮ ಪಕ್ಷ ಹಾಗೂ ಮಿತ್ರ ಪಕ್ಷಗಳು ಹೆಚ್ಚು ಸ್ಥಾನಗಳನ್ನು ಗಳಿಸಬೇಕಾಗಿದೆ. ಹೀಗಾಗಿ ಚುನಾವಣಾ ಪ್ರಚಾರದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕಾಗಿರುವುದರಿಂದ ಸ್ಪರ್ಧೆಯಿಂದ ದೂರ ಉಳಿದಿರುವುದಾಗಿ ಸುದ್ದಿಗಾರರಿಗೆ ಸ್ಪಷ್ಟ ಪಡಿಸಿದರು.
ಪಕ್ಷ ಹಾಗೂ ಜನರ ಹಿತದೃಷಿಯನ್ನು ಗಮನದಲ್ಲಿಟ್ಟುಕೊಂಡು ಸ್ಪರ್ಧಿಸದಿರಲು ತೀರ್ಮಾನ ಮಾಡಲಾಗಿದೆ. ಚುನಾವಣೆ ಪರಿಸ್ಥಿತಿಯನ್ನು ನೋಡಿಕೊಂಡು ಸ್ಪರ್ಧೆ ಬಗ್ಗೆ ನಿರ್ಧಾರ ಮಾಡಲಾಗುವುದು. ತಮ್ಮ ಸ್ಪರ್ಧೆ ಅಗತ್ಯವೆನಿಸಿದರಷ್ಟೆ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.
ಉತ್ತರಪ್ರದೇಶದಲ್ಲಿ ಈಗಾಗಲೇ ಸಮಾಜವಾದಿ ಪಕ್ಷ ಹಾಗೂ ರಾಷ್ಟ್ರೀಯ ಲೋಕದಳದೊಂದಿಗೆ ಬಿಎಸ್ಪಿ ಸೀಟ್ ಹೊಂದಾಣಿಕೆ ಮಾಡಿಕೊಂಡು ಚುನಾವಣಾ ಸ್ಪರ್ಧೆಗೆ ಇಳಿದಿದೆ.