ಬೆಂಗಳೂರು,ಮಾ.20- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಪಾಸಣೆ ನಡೆಸುತ್ತಿದ್ದ ಪೊಲೀಸರು 4.16 ಲಕ್ಷ ಹಣವನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು ಪೂರ್ವ ವಿಭಾಗದ ಮೂರು ಠಾಣೆ ವ್ಯಾಪ್ತಿಗಳಲ್ಲಿ ಹಣ ಪತ್ತೆಯಾಗಿದ್ದು, ಈ ಹಣ ಯಾರಿಗೆ ಸೇರಿದ್ದು, ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜೀವನ್ಭೀಮಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 1.76 ಲಕ್ಷ, ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಲಕ್ಷ, ರಾಮನಗರ ಠಾಣೆ ವ್ಯಾಪ್ತಿಯಲ್ಲಿ 1.40 ಲಕ್ಷ ಹಣ ಪತ್ತೆಯಾಗಿದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಚಾರಿ ದಳಗಳು ಎಲ್ಲ ಕಡೆ ಗಸ್ತು ತಿರುಗುತ್ತಿದ್ದು, ಈ ವೇಳೆ ಹಣ ಪತ್ತೆಯಾಗಿದೆ ಎಂದು ಹೇಳಲಾಗಿದೆ.