ಬೆಂಗಳೂರು: ಬೆಂಗಳೂರು ಉತ್ತರ ಅಥವಾ ತುಮಕೂರಿನಿಂದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ದೇವೇಗೌಡರು ಲೋಕಸಭಾ ಚುನಾವಣೆಯಲ್ಲಿ ವಾಯ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಗೊಂದಲ ಮುಂದುವರೆದಿರುವ ಬೆನ್ನಲ್ಲೇ ಮಾತನಾಡಿರುವ ಸಿಎಂ ಕುಮಾರಸ್ವಾಮಿ, ದೇವೇಗೌಡರು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬ ಬಗ್ಗೆ ತೀರ್ಮಾನ ಮಾಡಿಲ್ಲ. ಬಹುಶ: ಬೆಂಗಳೂರು ಉತ್ತರ ಅಥವಾ ತುಮಕೂರು ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದರು.
ಇನ್ನು ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಸಿಎಂ, ಮೂಲ ಕಾಂಗ್ರೆಸ್ಸಿಗರು ನಿಖಿಲ್ ಗೆ ಬೆಂಬಲ ನೀಡುತ್ತಿದ್ದಾರೆ. ಮಂಡ್ಯದಲ್ಲಿ ಕೆಲ ಕಾಂಗ್ರೆಸ್ಸಿಗರು ತುಂಬಾ ಮುಂದೆ ಹೋಗಿದ್ದಾರೆ. ಸ್ವಾಭಿಮಾನ ಕಳೆದುಕೊಂಡು ಅಂಥವರ ಬಳಿ ನಾನು ಭಿಕ್ಷೆ ಬೀಡುವುದಿಲ್ಲ. ನನಗೆ ನನ್ನ ಕಾರ್ಯಕರ್ತರೇ ಸಾಕು, ಅವರು ಸಮರ್ಥರಿದ್ದಾರೆ. ಬೆನ್ನಿಗೆ ಚೂರಿಹಾಕುವವರು ನಮಗೆ ಬೇಡ ಎಂದು ಹೇಳಿದರು.
ನಮ್ಮ ಸರ್ಕಾರ ಯಾರನ್ನೂ ರಕ್ಷಿಸುವ ಕೆಲಸವನ್ನು ಮಾಡುತ್ತಿಲ್ಲ. ತಪ್ಪು ಮಾಡಿದವರು ಎಷ್ಟೇ ಪ್ರಭಾವಿಯಾಗಿರಲಿ ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
Lok sabha election,H D kumaraswamy,H D Devegowda