ಭಾರತದ ಮೇಲೆ ಇನ್ನೊಂದು ಉಗ್ರರ ದಾಳಿ ನಡೆಸಿದಲ್ಲಿ ಪಾಕಿಸ್ತಾನ ಅತ್ಯಂತ ಕಷ್ಟಕರ ದಿನ ಎದುರಿಸಬೇಕಾಗುತ್ತದೆ: ಅಮೆರಿಕ ಎಚ್ಚರಿಕೆ

ವಾಷಿಂಗ್ಟನ್​: ಭಾರತದಲ್ಲಿ ಇನ್ನೊಂದು ಉಗ್ರ ದಾಳಿ ನಡೆದದ್ದೇ ಆದಲ್ಲಿ ಪಾಕಿಸ್ತಾನ, ಆ ಬಳಿಕ ಅತ್ಯಂತ ಕಷ್ಟಕರ ದಿನಗಳನ್ನು ಎದುರಿಸಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ.

ಉಗ್ರರ ದಮನ ಮಾಡುವ ನಿಟ್ಟಿನಲ್ಲಿ ಪಾಕ್ ಸರ್ಕಾರ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ ಎನ್ನುವುದು ನಾವು ಗಮನಿಸಿಬೇಕಿದೆ. ಇಲ್ಲವಾದಲ್ಲಿ ಮತ್ತೆ ಉಗ್ರ ಚಟುವಟಿಕೆಗಳು ಕಾಣಿಸಿಕೊಳ್ಳುತ್ತವೆ ಎಂದು ಅಮೆರಿಕದ ಶ್ವೇತಭವನವು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.

ಈ ಮೂಲಕ ಪಾಕಿಸ್ತಾನ ಮತ್ತೆ ಭಾರತದ ಮೇಲೆ ದಾಳಿ ನಡೆಸಿದಲ್ಲಿ, ಭಾರತ ಅತ್ಯಂತ ಪರಿಣಾಮಕಾರಿ ಪ್ರತ್ಯುತ್ತರ ನೀಡೋದು ನಿಶ್ಚಿತ ಎನ್ನುವ ಸಂದೇಶವನ್ನು ಪಾಕಿಸ್ತಾನಕ್ಕೆ ಅಮೆರಿಕ ರವಾನಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ