ಓಲಾ ಸೇವೆ 6 ತಿಂಗಳು ರದ್ದು

ಬೆಂಗಳೂರು:ನಿಯಮಗಳ ಪ್ರಕಾರ ಬಿಎಂಟಿಸಿ ವ್ಯಾಪ್ತಿಯಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ನೀಡುವಂತಿಲ್ಲ. ಇದನ್ನು ಈಗಾಗಲೇ ನಿಯಮಗಳನ್ನು ಮೀರಿದ್ದರಿಂದ ಓಲಾ ಕಂಪನಿಗೆ ಸೇರಿದ್ದ 5 ಬೈಕ್ ಟ್ಯಾಕ್ಸಿಯನ್ನು ಸಾರಿಗೆ ಇಲಾಖೆ ವಶಪಡಿಸಿ  ನೋಟಿಸ್ ನೀಡಿದ್ದರೂ ಉತ್ತರ ನೀಡದೆ ನಿರ್ಲಕ್ಷ್ಯ ವಹಿಸಿದ್ದಕ್ಕೆ ಸೇವೆಯನ್ನು ರದ್ದು ಮಾಡಲಾಗಿದೆ ಆರ್​ಟಿಒ ನಿಯಮಗಳನ್ನು ಗಾಳಿಗೆ ತೂರಿದ್ದಕ್ಕೆ ಆರು ತಿಂಗಳು ಕಾಲ ರಾಜಧಾನಿಯಲ್ಲಿ ಓಲಾ ಸೇವೆಯನ್ನು ರದ್ದು ಮಾಡಿ ಸಾರಿಗೆ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.

ಪರವಾನಗಿಯನ್ನು ರದ್ದುಗೊಳಿಸಿ ಸಾರಿಗೆ ಇಲಾಖೆಯ ಆಯುಕ್ತ ಇಕ್ಕೇರಿ ಆದೇಶ ಹೊರಡಿಸಿದ್ದಾರೆ.  ತಕ್ಷಣದಿಂದ ಜಾರಿಗೆ ಬರುವಂತೆ ಬೈಕ್​ ಟ್ಯಾಕ್ಸಿ ಓಲಾ ಸೇವೆಯನ್ನು ಸಾರಿಗೆ ಇಲಾಖೆ ರದ್ದು ಮಾಡಿದೆ. ಉಳಿದಂತೆ ಆಪ್​ ಆಧಾರಿತ ಟ್ಯಾಕ್ಸಿ ಸೇವೆಗೆ ಅನುವು ಮಾಡಿಕೊಡಲಾಗಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ