ತುಮಕೂರು ಕ್ಷೇತ್ರದಿಂದಲೇ ಸ್ಪರ್ಧೆ: ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಘೋಷಣೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದ್ದು, ತುಮಕೂರು ಕ್ಷೇತ್ರದಿಂದಲೇ ತಾವು ಕಣಕ್ಕಿಳಿಯುವುದಾಗಿ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಲೋಕಸಭಾ ಚುನಾವಣೆಗೆ ತಮ್ಮ ಕ್ಷೇತ್ರದ ಕುರಿತು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಮಾ.25ರಂದು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ತಾವು ನಾಮಪತ್ರ ಸಲ್ಲಿಕೆ ಮಾಡಿವುದಾಗಿಯೂ ಗೌಡರು ಹೇಳಿದ್ದಾರೆ.

ಇನ್ನು ಚುನಾವಣೆಗೆ ಎಲ್ಲಾ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದೆ ಎಂದು ಗೌಡರು ಇದೇವೇಳೆ ತಿಳಿಸಿದ್ದಾರೆ.

Lok Sabha election,JDS-Congress,tumakuru,HD Devegowda

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ