
ಕೋಲಾರ, ಮಾ.23-ದಾಖಲೆಯಿಲ್ಲದೆ ಸಾಗಿಸುತ್ತಿದ್ದ 1ಲಕ್ಷ 56ಸಾವಿರ ನಗದು ಹಣವನ್ನು ವಶ ಪಡಿಸಿಕೊಳ್ಳಲಾಗಿದೆ.
ಹುಂಡೈ ಕಾರಿನಲ್ಲಿ ಹಣ ಸಾಗಾಟ ಮಾಡುತ್ತಿದ್ದ ಟೆಕಲ್ ರಸ್ತೆ ಚೆಕ್ ಪೋಸ್ಟ್ ನಲ್ಲಿ ವಾಹನ ಪರಿಶೀಲನೆ ನಡೆಸಿದಾಗ ಕಾರಿನಲ್ಲಿ ಹಣವಿರುವುದು ಪತ್ತೆಯಾಗಿದೆ. ಕಾರು ಹಾಗೂ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.