ಲಖನೌ: ಮುಲಾಯಂ ಸಿಂಗ್ ಯಾದವ್ ಅವರು ಪ್ರತಿನಿಧಿಸುವ ಅಜಂಗಢದಿಂದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ.
ಈ ಮೂಲಕ ಮುಲಾಯಂ ಸಿಂಗ್ ಯಾದವ್ ಅವರು ತಮ್ಮದೇ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಊಹಾಪೋಹಗಳಿಗೆ ತೆರೆಬಿದ್ದಿದ್ದು, 2014ರಲ್ಲಿ ಗೆದ್ದು ಬಳಿಕ ರಾಜೀನಾಮೆ ಸಲ್ಲಿಸಿದ್ದ ಅವರು ಮೈನ್ಪುರಿಯಿಂದ ಸ್ಪರ್ಧಿಸಲಿದ್ದಾರೆ.
ಈ ಕುರಿತು ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಇಬ್ಬರು ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದ್ದು, ರಾಮ್ಪುರದ ಶಾಸಕರಾದ ಅಜಂ ಖಾನ್ ಅವರನ್ನು ರಾಮ್ಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.
ಇದರೊಂದಿಗೆ ಪಕ್ಷವು ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಕೂಡ ಘೋಷಿಸಿದ್ದು, ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್, ರಾಮ್ ಗೋಪಾಲ್ ಯಾದವ್, ಅಜಂಖಾನ್, ಜಯಾ ಬಚ್ಚನ್, ಡಿಂಪಲ್ ಯಾದವ್ ಮತ್ತು ತೇಜ್ಪ್ರತಾಪ್ ಯಾದವ್ ಅವರ ಹೆಸರಿದೆ. ಇನ್ನು ಮುಲಾಯಂ ಸಿಂಗ್ ಯಾದವ್ ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಹೊರಗಿಡಲಾಗಿದೆ.
Akhilesh Yadav to contest from Azamgarh,