ಮೈಸೂರು,ಮಾ.24- ಮುಂದಿನ ತಿಂಗಳು 18ರಂದು ನಡೆಯಲಿರುವ ಲೋಕಸಮರಕ್ಕೆ ಮಾ.26 ನಾಮಪತ್ರ ಸಲ್ಲಿಕೆಯ ಕೊನೆ ದಿನವಾಗಿರುವ ಹಿನ್ನೆಲೆಯಲ್ಲಿ ಎರಡು ದಿನಗಳು ಮಾತ್ರ ಬಾಕಿ ಇರುವುದರಿಂದ ನಾಮಪತ್ರ ಸಲ್ಲಿಕೆ ಭರಾಟೆ ತೀವ್ರಗೊಂಡಿದೆ.
ನಾಳೆ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ನಿಂದ ಅಭ್ಯರ್ಥಿಗಳು ಮೈಸೂರು ಮತ್ತು ಕೊಡಗು ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.
ಹಾಲಿ ಸಂಸದ ಬಿಜೆಪಿಯ ಪ್ರತಾಪ್ಸಿಂಹ ನಾಳೆ ಬೆಳಗ್ಗೆ 9 ಗಂಟೆಗೆ ನಗರದ ಕೋಟೆ ಆಂಜನೇಯ ಸ್ವಾಮಿ ದೇಗುಲದಲ್ಲಿ ಪೂಜೆ ನಂತರ ದೇವಸ್ಥಾನ ಸಮೀಪ ಸಾರ್ವಜನಿಕರ ಸಭೆ ನಡೆಸಿ ನಂತರ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಹಾಗೆಯೇ ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ ಪಾಲಾಗಿರುವ ಮೈಸೂರು-ಕೊಡು ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ವಿಜಯಶಂಕರ್ ಸಲ್ಲಿಸಲಿದ್ದಾರೆ.
ದೇಗುಲದಲ್ಲಿ ನಾಳೆ ಬೆಳಗ್ಗೆ 10.30ಕ್ಕೆ ಪೂಜೆ ಸಲ್ಲಿಸಿ ನಂತರ ಉಮೇದುವಾರು ಸಲ್ಲಿಸುವರು.
ಇದಲ್ಲದೆ ಬೇರೆ ಬೇರೆ ಪಕ್ಷಗಳ ಅಭ್ಯರ್ಥಿಗಳು ಹಾಗೂ ಪಕ್ಷೇತರರು ನಾಮಪತ್ರ ಸಲ್ಲಿಸಲಿದ್ದಾರೆ.