ಪಾಕ್ ಗುಂಡಿನ ದಾಳಿಗೆ ಭಾರತೀಯ ಯೋಧ ಹುತಾತ್ಮ

ಶ್ರೀನಗರ: ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಮತ್ತೆ ಉದ್ಧಟತನ ಮೆರೆದಿದ್ದು, ಜಮ್ಮು-ಕಾಶ್ಮೀರದ ಪೂಂಛ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿ ಗುಂಡಿನ ದಾಳಿ ನಡೆಸಿದೆ. ಪರಿಣಾಮ ಭಾರತೀಯ ಸೇನೆ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ.

ಕಾಶ್ಮೀರದ ಪೂಂಛ್ ಸೆಕ್ಟರ್ ನಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದೆ.

ಗಡಿಯಲ್ಲಿ ತೀವ್ರ ಪ್ರಮಾಣದಲ್ಲಿ ಶೆಲ್ ದಾಳಿಯಾಗುತ್ತಿದ್ದು, ಪಾಕ್ ಸೇನೆಗೆ ಭಾರತೀಯ ಸೇನೆಯ ಸೈನಿಕರೂ ಕೂಡ ದಿಟ್ಟ ಉತ್ತರ ನೀಡುತ್ತಿದ್ದಾರೆ. ರಜೌರಿ ಜಿಲ್ಲೆಯಲ್ಲೂ ತೀವ್ರ ಗುಂಡಿನ ಚಕಮಕಿ ನಡೆಯುತ್ತಿದ್ದು, ಪಾಕಿಸ್ತಾನದ ಗುಂಡಿನ ದಾಳಿಗೆ ಈ ಭಾಗದ ಗ್ರಾಮಗಳಲ್ಲಿನ ಮನೆಗಳಿಗೆ ಹಾನಿಯಾಗಿದೆ.

Jammu and Kashmir, One Army jawan has lost his life,pakistan ceasefire

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ