ನಾಳೆ ಗಣ್ಯ ವ್ಯಕ್ತಿಗಳಿಗೆ ಸಮಾಜ ಸೇವಾರತ್ನ ಪ್ರಶಸ್ತಿ ಪ್ರಧಾನ ಸಮಾರಂಭ

ಬೆಂಗಳೂರು, ಮಾ.25-ಸಂದೇಶ್ ಯುವ ವೇದಿಕೆಯ 27ನೇ ವಾರ್ಷಿಕೋತ್ಸವದ ಪ್ರಯುಕ್ತ ಸಾಹಿತ್ಯ ಸಾಂಸ್ಕøತಿಕ ಸಮಾಜ ಸೇವೆಯ ವಿಶೇಷ ಕಾರ್ಯಕ್ರಮದ ಅಂಗವಾಗಿ ನಾಳೆ ಸಂಜೆ 6.30ಕ್ಕೆ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಾಡಿನ ಖ್ಯಾತ ಗಣ್ಯ ವ್ಯಕ್ತಿಗಳಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ನಿವೃತ್ತ ಮುಖ್ಯ ನ್ಯಾಯಾಧೀಶರಾದ ಎ.ಜೆ.ಸದಾಶಿವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ಡಾ.ಮನುಬಳಿಗಾರ್, ಎಬಿಎಸ್‍ಎಸ್‍ಕೆ ಸಮಾಜದ ಅಧ್ಯಕ್ಷ ಸ್ವಾಮಿಸಾ ಎಲ್.ಖೋಟೆ, ಉಪಾಧ್ಯಕ್ಷ ಸತ್ಯನಾರಾಯಣ ವಿ.ಡಮಾಮ್ ನಾಡಿನ ಗಣ್ಯರಿಗೆ ಅಭಿನಂದಿಸಲಿದ್ದಾರೆ.

ಶ್ರೀಕೊಳದ ಮಹಾಸಂಸ್ಥಾನ ಮಠದ ಶ್ರೀ ಶಾಂತವೀರ ಸ್ವಾಮೀಜಿ, ಓಂಕಾರಾಶ್ರಮದ ಶ್ರೀ ಮಧುಸೂದನಾನಂದಪುರಿ ಸ್ವಾಮೀಜಿ, ಗವೀಪುರಂ ಶ್ರೀ ಭವಾನಿಪೀಠದ ಶ್ರೀ ಮಂಜುನಾಥಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯರಾದ ಲೀಲಾದೇವಿ ಆರ್.ಪ್ರಸಾದ್, ಎಸ್‍ಎಸ್‍ಕೆ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ.ಬಿ.ಗುಲಾಬಿಬಾಯಿ ವಯೋವೃದ್ಧರಿಗೆ ಉಚಿತ ಸೀರೆ ವಿತರಿಸಲಿದ್ದಾರೆ.

ಎಬಿಎಸ್‍ಎಸ್‍ಕೆ ಸಮಾಜದ ಅಧ್ಯಕ್ಷ ಶ್ರೀನಿವಾಸ ಶ್ರೀ ಹರಿಸಾ ಖೋಡೆ, ಕಾವೇರಿಪುತ್ರರ ಸಂಘದ ಅಧ್ಯಕ್ಷ ಡಾ.ಎಸ್.ಅನಂತ್ ವಯೋವೃದ್ಧರಿಗೆ ಉಚಿತ ಧೋತಿ ವಿತರಿಸುವರು.

ಎಸ್‍ಎಸ್‍ಕೆ ಸಂಘದ ಅಧ್ಯಕ್ಷ ಬಿ.ಆರ್.ಶ್ಯಾಮ್, ಸಾಹಿತಿ ರವಿ, ಕೊಡಗು ಗಣೇಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಹಿರಿಯ ಸಂಶೋಧಕ ಡಾ.ಚಿದಾನಂದಮೂರ್ತಿ, ಪತ್ರಕರ್ತ ಸುರೇಶ್‍ಚಂದ್ರ, ಗಾಯಕ ರತ್ನಮಾಲಾ ಪ್ರಕಾಶ್, ಹಾಸ್ಯನಟ ವೈಜನಾಥ್ ಬಿರಾದರ್, ನಿವೃತ್ತ ಸರ್ಕಾರದ ಕಾರ್ಯದರ್ಶಿ ಡಾ.ಸಿ.ಸೋಮಶೇಖರ್ ಅವರಿಗೆ ಸಮಾಜಸೇವಾ ರತ್ನ ಪ್ರಶಸ್ತಿ ನೀಡಿ ಅಭಿನಂದಿಸಲಾಗುವುದು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ