ಈ ಚುನಾವಣೆಯಲ್ಲಿಯೂ ಮೋದಿ ಗೆದ್ದರೆ, ಪ್ರಜಾಪ್ರಭುತ್ವ ಸಂಪೂರ್ಣ ನಾಶವಾಗುತ್ತದೆ : ಅರವಿಂದ್ ಕೇಜ್ರಿವಾಲ್

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಈಬಾರಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸೋಲಿಸಲೇಬೇಕು. ಇಲ್ಲವಾದಲ್ಲಿ ಅವರು ಶಾಸ್ವತವಾಗಿ ಪ್ರಧಾನಿಯಾಗೇ ಇರುತ್ತಾರೆ. ಅಲ್ಲದೇ 2019 ಚುನಾವಣೆ ಬಳಿಕ ಮತ್ತೆ ಚುನಾವಣೆ ನಡೆಯಲೂ ಮೋದಿ ಬಿಡುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಮೋದಿ ಮತ್ತೆ ಪ್ರಧಾನಿ ಗದ್ದುಗೆ ಏರಿದರೆ 2019ರ ನಂತರ ಯಾವುದೇ ಚುನಾವಣೆ ಇರೋದಿಲ್ಲ.

ಪ್ರಜಾಪ್ರಭುತ್ವ ಸಂಪೂರ್ಣ ನಾಶವಗೊಹೋಗುತ್ತದೆ ಎಂದು ಕೇಜ್ರಿವಾಲ್ ಕಳವಳ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಪ್ರಜಾಪ್ರಭುತ್ವ ಅಳಿವಿನಂಚಿಗೆ ತಲುಪುತ್ತಿದೆ. ಮೋದಿ ಸರ್ಕಾರ ಜರ್ಮನ್ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ನ ಆಡಳಿತದ ಮಾದರಿಯನ್ನು ಅನುಸರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ಮತ್ತೆ ಮೋದಿ ಪ್ರಧಾನಿಯಾದರೆ ದೇಶದಲ್ಲಿ ಸರ್ವಾಧಿಕಾರಿ ಸರ್ಕಾರ ನೆಲೆಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿರುವ ಕೇಜ್ರಿವಾಲ್, ಮೋದಿ ಸರ್ಕಾರದ ವಿರುದ್ಧ ಮಾತನಾಡುವವರಿಗೆ ದೇಶದ್ರೋಹಿ ಪಟ್ಟ ಕಟ್ಟುತ್ತಾರೆ ಎಂದು ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ