
ತುಮಕೂರು,ಮಾ.25- ಮಾಜಿ ಪ್ರಧಾನಿ ದೇವೇಗೌಡರಿಗೆ ಸೆಡ್ಡು ಹೊಡೆದು ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ಹಾಲಿ ಸಂಸದ ಮುದ್ದಹನುಮೇಗೌಡರು ಇಂದು ನಾಮಪತ್ರ ಸಲ್ಲಿಸಿದರು.
ಇದಕ್ಕೂ ಮುನ್ನ ತುಮಕೂರು ನಗರದ ಹೊರವಲಯದಲ್ಲಿ ಶೆಟ್ಟಿಹಳ್ಳಿಯಲ್ಲಿರುವ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿ ನಂತರ ಸಾವಿರಾರು ಕಾರ್ಯಕರ್ತರೊಂದಿಗೆ ನಗರದ ಟೌನ್ಹಾಲ್ ವೃತ್ತಕ್ಕೆ ಆಗಮಿಸಿ ಅಲ್ಲಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೆಂಬಲಿಗರೊಂದಿಗೆ ಸಾಗಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ತುರುವೇಕೆರೆಯ ರಾಯಸಂದ್ರದ ರವಿ, ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು ಸಾಸಲು ಸತೀಶ್, ತುಮಕೂರು ಗ್ರಾಮಾಂತರದ ದೇವರಾಜ್ ಸೇರಿದಂತೆ ಹಲವಾರು ಮುಖಂಡರು, ಕಾರ್ಯಕರ್ತರೊಂದಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ರಾಕೇಶ್ ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು.