ಬೆಂಗಳೂರು, ಮಾ.25- ಓಲಾ ಕಂಪನಿ ಅಮಾನತ್ತು ಆದೇಶ ಹಿಂಪಡೆದಿದ್ದು 15ಲಕ್ಷ ರೂ.ದಂಡ ವಿಧಿಸಲಾಗಿದೆ ಇದರಲ್ಲಿ ಯಾವುದೇ ರಾಜಕೀಯ ಒತ್ತಡವಿಲ್ಲವೆಂದು ರಾಜ್ಯ ಸಾರಿಗೆ ಪ್ರಾಧಿಕಾರ ಸ್ಪಷ್ಟಪಡಿಸಿದೆ.
ಈ ಕುರಿತು ಪ್ರತಿಕಾಗೋಷ್ಟಿಯಲ್ಲಿ ಇಂದು ಮಾತನಾಡಿದ ಸಾರಿಗೆ ಆಯುಕ್ತ ಹಾಗೂ ಪ್ರಾಧಿಕಾರದ ಅಧ್ಯಕ್ಷ ವಿ.ಪಿ.ಇಕ್ಕೇರಿ ಅವರು ಓಲಾ ಪರವಾನಿಗಿ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ ಮತ್ತು ಓಲಾ ಕಂಪನಿಗೆ 15ಲಕ್ಷ ರೂ.ದಂಡ ವಿಧಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಕಾನೂನು ಪ್ರಕಾರ ಅಮಾನತು ಆದೇಶ ಹೊರಡಿಸಿದ್ದೆವು, ಅಮಾನತು ಹಿಂಪಡೆದ ನಿರ್ಧಾರದ ಹಿಂದೆ ಯಾವುದೇ ರಾಜಕೀಯ ಒತ್ತಡವಿಲ್ಲ. ಕಂಪನಿ ತನ್ನ ತಪ್ಪನ್ನು ಒಪ್ಪಿಕೊಂಡು ಪ್ರಾಧಿಕಾರದ ನಿರ್ಧಾರಕ್ಕೆ ಬದ್ಧವಾಗಿ ಮುಚ್ಚಳಿಕೆ ಬರೆದುಕೊಟ್ಟಿದೆ.ಈ ಸಂಬಂಧ ಪ್ರಾಧಿಕಾರದಲ್ಲಿ ಚರ್ಚಿಸಿ 15ಲಕ್ಷ ರೂ.ದಂಡ ವಿಧಿಸಲಾಗಿದೆ.
ನಿಯಮ ಉಲ್ಲಂಘನೆ ಪುನರಾವರ್ತನೆ ಆದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದರು.
ರ್ಯಾಪಿಡೋ ಕಂಪನಿ ಬೈಕ್, ಟ್ಯಾಕ್ಸಿ ಕಾರ್ಯಾಚರಣೆ ಮಾಡುತ್ತಿದ್ದು ಈ ಕಂಪನಿಗೂ ಮಾ. 19ಕ್ಕೆ ನೋಟಿಸ್ ನೀಡಲಾಗಿದೆ ಎಂದರು.