ಬೆಂಗಳೂರು, ಮಾ.25-ರಾಜ್ಯದಲ್ಲಿ ಎರಡನೇ ಹಂತದಲ್ಲಿ ನಡೆಯುವ ಲೋಕಸಭಾ ಚುನಾವಣೆಗೆ ಮಾ.28 ರಂದು ಅಧಿಸೂಚನೆ ಹೊರಬೀಳಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
2ನೇ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಏ.23ರಂದು ಮತದಾನ ನಡೆಯಲಿದ್ದು, ಮಾ.28 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏ.4ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ.ಏ.5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಭ್ಯರ್ಥಿಗಳು ನಾಮಪತ್ರ ವಾಪಸ್ ಹಿಂಪಡೆಯಲು ಏ.8ರವರೆಗೆ ಅವಕಾಶವಿದೆ.
ಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬೀದರ್, ಬಳ್ಳಾರಿ, ಕಲಬುರಗಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ರಾಯಚೂರು, ಕೊಪ್ಪಳ, ವಿಜಯಪುರ, ಹಾವೇರಿ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಮೇ 23 ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.
* ಉಮೇಶ್‍ಜಾಧವ್ ರಾಜೀನಾಮೆ ಪ್ರಕರಣ ವಿಚಾರಣೆ
* ಕ್ಷೇತ್ರದ ಮತದಾರರಿಗೂ ವಾದ ಮಂಡಿಸಲು ಅವಕಾಶ
* ವಾದಕ್ಕೆ ಪ್ರತ್ಯುತ್ತರಿಸಲೂ ಶಾಸಕರಿಗೆ ಅವಕಾಶ
* ಅನರ್ಹಗೊಂಡರೂ ಚುನಾವಣೆಯಲ್ಲಿ ಸ್ಪರ್ಧಿಸಲು ಅಡ್ಡಿಯಿಲ್ಲ
* ರಾಜೀನಾಮೆ ತೀರ್ಪು ಕಾಯ್ದಿರಿಸಿದ ಸ್ಪೀಕರ್
* ಕಾಯ್ದೆ ತಿದ್ದುಪಡಿಗೆ ಸ್ಪೀಕರ್ ಅವರ ಬಲವಾದ ಪ್ರತಿಪಾದನೆ