ಕುತೂಹಲ ಮುಂದುವರೆದ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ವಿಚಾರ

ಬೆಂಗಳೂರು, ಮಾ.25-ಇಡೀ ದೇಶದಾದ್ಯಂತ ಗಮನ ಸೆಳೆದಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾರೆಂಬ ಕುತೂಹಲ ಇನ್ನೂ ಮುಂದುವರೆದಿದೆ.

ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಈ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಆದರೂ ಅದು ಸ್ಪಷ್ಟತೆ ಪಡೆದಿಲ್ಲ. ಇದರ ನಡುವೆ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ದಿವಂಗತ ಅನಂತ್‍ಕುಮಾರ್ ಅವರ ಪತ್ನಿ ತೇಜಸ್ವಿನಿ ಅವರು ಕಣಕ್ಕಿಳಿಯುತ್ತಾರೆ ಎಂಬ ಮಾತುಗಳೂ ಕೂಡ ಕೇಳಿ ಬರುತ್ತಿದೆ.

ಆದರೆ ಇಂದು ಅವರು ನಾಮಪತ್ರ ಸಲ್ಲಿಸುವುದಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ. ಆದ್ದರಿಂದ ಇನ್ನೂ ನಾಮಪತ್ರ ಸಲ್ಲಿಕೆಗೆ ನಾಳೆ ಒಂದೇ ದಿನ ಬಾಕಿ ಉಳಿದಿರುವುದರಿಂದ ಈ ಕ್ಷೇತ್ರದ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಕ್ಷೇತ್ರದಲ್ಲಿನ ಬಿಜೆಪಿ ಶಾಸಕರು, ಮುಖಂಡರು, ಕಾರ್ಯಕರ್ತರನ್ನು ಕಾಡುತ್ತಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ