ವಿಜಯವಾಡ: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿರುವ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕ ಫಾರೂಕ್ ಅಬ್ದುಲ್ಲಾ, ಪಾಕಿಸ್ತಾನದ ಬಾಲಾಕೋಟ್ ಮೇಲೆ ವೈಮಾನಿಕ ದಾಳಿ ಬಳಿಕ ಬಿಜೆಪಿ ಯಾವ ನಾಯಕರೂ ರಾಮ ಮಂದಿರ ಕುರಿತು ಮಾತನಾಡುತ್ತಲೇ ಇಲ್ಲ ಎಂದು ಹೇಳಿದ್ದಾರೆ.
ಆಂಧ್ರಪ್ರದೇಶಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ರಾಮ ಮಂದಿರದ ಕುರಿತು ಈಗ ಯಾರೊಬ್ಬರೂ ಮಾತನಾಡುತ್ತಿಲ್ಲ. ಬಾಲಕೋಟ್ ದಾಳಿಯ ಮುನ್ನ ರಾಮ ಮಂದಿರ, ರಾಮ ಮಂದಿರ ಎನ್ನುವ ಕೂಗು ಕೇಳುತ್ತಿತ್ತು. ಈಗ ರಾಮ ಮಂದಿರದ ಕುರಿತು ಯಾರೂ ಹೇಳಿಕೆಗಳನ್ನು ನೀಡುತ್ತಿಲ್ಲ. ವೈಮಾನಿಕ ದಾಳಿ ಬಳಿಕ ರಾಮ ಮಂದಿರವನ್ನು ಬಿಜೆಪಿ ನಾಯಕರು ಮರೆತುಬಿಟ್ಟರು ಎಂದು ಕಿಡಿಕಾರಿದ್ದಾರೆ.
ಪಾಕಿಸ್ತಾನದ ಬಾಲಕೋಟ್ ಉಗ್ರರ ನೆಲೆಯ ಮೇಲೆ ಭಾರತೀಯ ವಾಯು ಪಡೆ ನಡೆಸಿ ಏರ್ ಸ್ಟ್ರೈಕ್ ದಾಳಿಯಲ್ಲಿ 300 ಜನ ಉಗ್ರರು ಹತ್ಯೆಯಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ ನಿಜವಾಗಿ ಏನು ಆಗಿದೆ ಎಂದು ಯಾವುದೇ ಮಾಹಿತಿ ನೀಡಿಲ್ಲ. ಈ ಕುರಿತು ಯಾರಾದರೂ ಪ್ರಶ್ನಿಸಿದರೆ ಅವರು ದೇಶದ್ರೋಹಿಗಳಾಗುತ್ತಾರೆ. ಇಲ್ಲವೆ ಪಾಕ್ ಪ್ರಜೆ ಎಂದು ಬಿಂಬಿಸಲಾಗುತ್ತಿದೆ ಎಂದು ಆರೋಪಿಸಿದರು.
ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನವನ್ನು ಬಗ್ಗು ಬಡಿಯುತ್ತಾರೆ ಎಂದು ಬಿಜೆಪಿಯವರು ಬಿಂಬಿಸಿದ್ದರು. ಆದರೆ ಪ್ರಧಾನಿ ಮೋದಿ ಪಾಕಿಸ್ತಾನವನ್ನು ಬಗ್ಗು ಬಡಿದರೇ? ಉಗ್ರರ ಅಟ್ಟಹಾಸ ನಿಂತುಹೋಯಿತೇ ಎಂದು ಫಾರೂಕ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ.
farooq abdullah slams govt over air strike ram temple